ಭಾರತ, ಮಾರ್ಚ್ 11 -- 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್​ಗೆ ದಿನಗಣನೆ ಶುರುವಾಗಿದೆ. ಮಾರ್ಚ್ 22ರಿಂದ ಟೂರ್ನಿ ಆರಂಭಗೊಳ್ಳಲಿದ್ದು, ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಸೆಣಸಾಟ ನಡೆಸಲಿವೆ. ಈಗಾಗಲೇ ಎಲ್ಲಾ ತಂಡಗಳು ನಾಯಕರನ್ನು ಘೋಷಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಮಾತ್ರ ಬಾಕಿ ಉಳಿಸಿಕೊಂಡಿದೆ. ರಿಷಭ್ ಪಂತ್ ನಿರ್ಗಮನದ ನಂತರ ಆ ಸ್ಥಾನವನ್ನು ಕೆಎಲ್ ರಾಹುಲ್ ತುಂಬಲಿದ್ದಾರೆ ಎನ್ನಲಾಗಿತ್ತು. ಆದರೆ, ರಾಹುಲ್ ನಾಯಕತ್ವವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ.

ಎರಡು ದಿನಗಳ ಹರಾಜು ಪ್ರಕ್ರಿಯೆ ಮುಗಿದ ನಂತರ ಅಕ್ಷರ್ ಪಟೇಲ್, ಕೆಎಲ್ ರಾಹುಲ್ ಮತ್ತು ಫಾಫ್ ಡು ಪ್ಲೆಸಿಸ್ ನಾಯಕತ್ವದ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದರು. ನಂತರ ರಾಹುಲ್ ಮತ್ತು ಅಕ್ಷರ್ ಅವರ ನಡುವೆ ಪೈಪೋಟಿ ಇದೆ. ಒಬ್ಬರು ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಅಂತಿಮವಾಗಿ ಡಿಸಿ ಮಾಲೀಕರು ತಂಡ ಮುನ್ನಡೆಸುವ ಪ್ರಸ್ತಾಪವನ್ನು ರಾಹುಲ್ ಮುಂದಿಟ್ಟಿದ್ದರು. ಆದರೆ ಕ...