ಭಾರತ, ಮೇ 21 -- ನಾಕೌಟ್ ಎಂದೇ ಹೇಳಲಾಗಿದ್ದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 59 ರನ್ಗಳ ಭರ್ಜರಿ ಗೆಲುವಿನೊಂದಿಗೆ 18ನೇ ಆವೃತ್ತಿಯ ಐಪಿಎಲ್ನಲ್ಲಿ ನಾಲ್ಕನೇ ತಂಡವಾಗಿ ಪ್ಲೇಆಫ್ಗೆ ಲಗ್ಗೆ ಇಟ್ಟಿದೆ. ಕಳೆದ ವರ್ಷ ನಾಯಕತ್ವ ಬದಲಾವಣೆ ಹಿನ್ನೆಲೆ ಭಾರೀ ಟೀಕೆಗೆ ಗುರಿಯಾಗಿದ್ದ ಮುಂಬೈ ಇದೀಗ ಆರನೇ ಟ್ರೋಫಿ ಲೋಡಿಂಗ್ನಲ್ಲಿ ಇಟ್ಟಿದೆ. ಐಪಿಎಲ್ ಇತಿಹಾಸದಲ್ಲಿ 11ನೇ ಸಲ ಪ್ಲೇಆಫ್ ಪ್ರವೇಶಿಸಿದಂತಾಗಿದೆ. ಪ್ರಸಕ್ತ ಆವೃತ್ತಿಯಲ್ಲಿ ಮುಂಬೈಗೂ ಮುನ್ನ ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಪ್ಲೇಆಫ್ಗೆ ಲಗ್ಗೆ ಇಟ್ಟಿದ್ದವು. ಆದರೆ ಈಗ ಡೆಲ್ಲಿ ಮತ್ತೊಮ್ಮೆ ಅಗ್ರ-4ರೊಳಗೆ ಪ್ರವೇಶಿಸಲು ವಿಫಲವಾಯಿತು. ಇದರೊಂದಿಗೆ ತನ್ನ ಚೊಚ್ಚಲ ಟ್ರೋಫಿ ಕನಸೂ ಭಗ್ನವಾಯಿತು.
ಮುಂಬೈನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ಜರುಗಿದ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ತಂಡವು ಸೂರ್ಯಕುಮಾರ್ ಯಾದವ್ ಅವರ ಅಜೇಯ 73 ರನ್ಗಳ ಆರ್ಭಟದ ನೆರವಿನಿಂದ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.