ಭಾರತ, ಮಾರ್ಚ್ 7 -- ಮಾರ್ಚ್ 9 ರಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್‌ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸುವ ಮೂಲಕ ಭಾರತ ತಂಡವು ಫೈನಲ್‌ನಲ್ಲಿ ಸ್ಥಾನ ಪಡೆದುಕೊಂಡಿದೆ. ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ವಿರುದ್ಧ ಸಮಗ್ರ ಗೆಲುವು ಸಾಧಿಸಿದ ನ್ಯೂಜಿಲೆಂಡ್ ಪ್ರಶಸ್ತಿ ಸುತ್ತಿಗೆ ತಲುಪಿದೆ. ಟೂರ್ನಿಯಲ್ಲಿ ಅಜೇಯ ಏಕೈಕ ತಂಡವಾಗಿರುವ ಕಾರಣ ಭಾರತವೇ ಟ್ರೋಫಿ ಗೆಲ್ಲುವ ಫೇವರಿಟ್ ಎನಿಸಿಕೊಂಡಿದೆ. ಮೆನ್ ಇನ್ ಬ್ಲೂ ತಂಡವು ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸಹ ಸೋಲಿಸಿದ್ದು, 3ನೇ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಗೆಲ್ಲುವ ಭರವಸೆ ಮತ್ತಷ್ಟು ಹೆಚ್ಚಿಸಿದೆ.

ಹಾಗಂತ, ನ್ಯೂಜಿಲೆಂಡ್ ತಂಡವನ್ನು ಯಾವುದೇ ಕಾರಣಕ್ಕೂ ಹಗುರವಾಗಿ ಪರಿಗಣಿಸುವಂತಿಲ್ಲ. ಐಸಿಸಿ ಟೂರ್ನಿಗಳ ನಾಕೌಟ್​ ಹಂತದಲ್ಲೇ ಭಾರತ ತಂಡವನ್ನು ಹಲವು ಬಾರಿ ಸೋಲಿಸಿದ ಉದಾಹರಣೆಗಳಿವೆ. 2000ರ ಚಾಂಪಿಯನ್ಸ್ ಟ್ರೋ...