ಭಾರತ, ಮಾರ್ಚ್ 2 -- ಚೆನ್ನೈ: ಮುಂದಿನ ವರ್ಷ (2026) ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೂ ಮುನ್ನ ಈ ಬಾರಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿರುವುದು ನಟ ದಳಪತಿ ವಿಜಯ್. ತಮಿಳಗ ವೆಟ್ರಿ ಕಾಳಗಂ (TVK -Thamizhaga Vettri Kazhagam) ಪಕ್ಷ ಸ್ಥಾಪಿಸಿರುವ ವಿಜಯ್‌, ತಮಿಳುನಾಡಿನಲ್ಲಿ ಗೆಲುವು ಸಾಧಿಸಿ ಆಡಳಿತ ನಡೆಸುವ ವಿಶ್ವಾಸದಲ್ಲಿದ್ದಾರೆ. ಇದೀಗ ರಾಜಕೀಯ ತಂತ್ರಜ್ಞ ಮತ್ತು ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಕೂಡಾ ಇದಕ್ಕೆ ಪುಷ್ಠಿ ನೀಡುವ ಹೇಳಿಕೆ ನೀಡಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆ ಮೈತ್ರಿ ಮಾಡದೆಯೇ ನಟ ವಿಜಯ್ ಸ್ಥಾಪಿಸಿದ ರಾಜಕೀಯ ಪಕ್ಷ ಟಿವಿಕೆ ಗೆಲುವು ಸಾಧಿಸಲಿದೆ ಎಂದು ಪ್ರಶಾಂತ್ ಕಿಶೋರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ತಂತಿ ಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೇಲುಗೈ ಸಾಧಿಸಿಲು ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ಬೆಂಬಲ ಬೇಕು ಎಂಬ ಪರಿಕಲ್ಪನೆಯನ್ನು ಕಿಶೋರ್...