Bengaluru, ಮೇ 26 -- ಊಟಿ: ತಮಿಳುನಾಡಿನ ನೀಲಗಿರಿ ಪ್ರದೇಶದಲ್ಲಿ ಭಾರೀ ಮಾಳೆಯಾಗುತ್ತಿದ್ದು, ಸಾಮಾನ್ಯ ಜನಜೀವನಕ್ಕೆ ತೊಂದರೆ ಉಂಟಾಗಿದೆ. ಅದರ ಬೆನ್ನಲ್ಲೇ ಐಎಂಡಿ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಊಟಿ ಸಹಿತ ಗುಡ್ಡಗಾಡು ಪ್ರವಾಸಿ ಆಕರ್ಷಣೆಯ ಪ್ರಸಿದ್ಧ ಸ್ಥಳಗಳನ್ನು ಪ್ರವಾಸಿಗರಿಗೆ ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ, ಪ್ರವಾಸಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಸ್ಥಳಗಳನ್ನು ಮುಚ್ಚುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಬೋಟ್ ಹೌಸ್, ದೊಡ್ಡಬೆಟ್ಟ ಶಿಖರ, ಪೈನ್ ಅರಣ್ಯ ಮತ್ತು ಇತರ ಸ್ಥಳಗಳನ್ನು ಮುಚ್ಚಲಾಗಿದೆ. ಜತೆಗೆ ಹಿರಿಯ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದ್ದಾರೆ. ಅಲ್ಲದೆ, ಊಟಿ-ಕೂನೂರು ರಸ್ತೆಯಲ್ಲಿ 60ಕ್ಕೂ ಅಧಿಕ ಮರಗಳು ಉರುಳಿ ಬಿದ್ದಿವೆ, 14 ಸ್ಥಳಗಳಲ್ಲಿ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಹೀಗಾಗಿ ಜನರಿಗೆ ತೊಂದರೆ ಉಂಟಾಗ...
Click here to read full article from source
To read the full article or to get the complete feed from this publication, please
Contact Us.