Kodagu, ಮೇ 24 -- ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಗೂ ಮುನ್ನವೇ ವರುಣನ ಅಬ್ಬರ ಜೋರಾಗಿದ್ದು. ಶನಿವಾರ ದಿನವಿಡೀ ಮಡಿಕೇರಿ, ಸೋಮವಾರಪೇಟೆ, ವೀರಾಜಪೇಟೆ ತಾಲ್ಲೂಕಿನಲ್ಲಿ ಮಳೆಯಾಗುತ್ತಿದೆ. ಮಳೆಯಿಂದ ಅನಾಹುತವಾಗಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಭಾಗಮಂಡಲ ಭಾಗದಲ್ಲಿ ಕಾವೇರಿ ನದಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಭಾರೀ ಗಾಳಿಗೆ ಮಳೆ ಮರ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ವಿದ್ಯುತ್ ಸಂಪರ್ಕವೂ ಕಡಿದು ಹೋಗಿತ್ತು.
ಕೊಡಗಿನ ವಿರಾಜಪೇಟೆ ತಾಲೂಕು ತೋರ ಹಾಗೂ ಅಕ್ಕಪಕ್ಕದ ಗ್ರಾಮಗಳಲ್ಲಿ ಗಾಳಿ ಹಾಗೂ ಮಳೆಗೆ 9 ವಿದ್ಯುತ್ ಕಂಬಗಳು ಧರೆಗೆ ಉರುಳಿ ಬಿದ್ದಿವೆ. ಮಳೆಯಿಂದಾಗಿ ವಿದ್ಯುತ್ ಸಂಪರ್ಕವಿಲ್ಲದೇ ಜನ ತೊಂದರೆ ಅನುಭವಿಸಿದರು.
ಕೊಡಗು ಜಿಲ್ಲೆಯಲ್ಲಿ ಮಳೆಯ ಜತೆಗೆ ಗಾಳಿಯೂ ಇದ್ದುದರಿಂದ ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಆದರೆ ವಿದ್ಯುತ್ ಕಂಬ ವಿದ್ಯುತ್ ಎಲ್ಲಿಯೂ ಅನಾಹುತವಾದ ವರದಿಯಾಗಿಲ್ಲ.
ಕೊಡಗಿನಲ್ಲಿ ಸುರಿದ ಭಾರೀ ಗಾಳಿ ಮಳೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.