ಭಾರತ, ಏಪ್ರಿಲ್ 12 -- ಗುಜರಾತ್‌ ಟೈಟನ್ಸ್‌ ವಿರುದ್ಧದ ಐಪಿಎಲ್‌ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್‌ ತಂಡ ಗೆದ್ದು ಬೀಗಿದೆ. ತವರಿನ ಅಭಿಮಾನಿಗಳ ಬಲದೊಂದಿಗೆ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡವು 6 ವಿಕೆಟ್‌ಗಳಿಂದ ಗೆದ್ದಿದೆ. ಇದರೊಂದಿಗೆ ಟೂರ್ನಿಯಲ್ಲಿ ನಾಲ್ಕನೇ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿಯೂ ಬಡ್ತಿ ಪಡೆದಿದೆ. ಅತ್ತ ಜಿಟಿ ತಂಡವು ಸತತ ನಾಲ್ಕು ಗೆಲುವಿನ ಬಳಿಕ ಟೂರ್ನಿಯಲ್ಲಿ ಎರಡನೇ ಸೋಲು ಕಂಡಿದೆ. ಐಡೆನ್‌ ಮರ್ಕ್ರಾಮ್‌ ಮತ್ತು ನಿಕೋಲಸ್‌ ಪೂರನ್‌ ಆಕರ್ಷಕ ಶತಕಗಳು ಎಲ್‌ಎಸ್‌ಜಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದವು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟನ್ಸ್‌ 6 ವಿಕೆಟ್‌ ನಷ್ಟಕ್ಕೆ 180 ರನ್‌ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್‌ ನಡೆಸಿದ ಲಕ್ನೋ 19.3 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 186 ರನ್‌ ಗಳಿಸಿ ಗೆದ್ದು ಬೀಗಿತು. ಆಯುಷ್‌ ಬದೋನಿ ಗೆಲುವಿನ ಸಿಕ್ಸರ್‌ ಬಾರಿಸಿದರು.

ಟೈಟನ್ಸ್‌ ಆರಂಭ ಉತ್ತಮವಾಗಿತ್ತು. ಟೂರ್ನಿಯಲ್ಲಿ ಅಮೋ...