ಭಾರತ, ಮಾರ್ಚ್ 25 -- ಬೆಂಗಳೂರು: ಪತಿಯು ಹಲವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಮತ್ತು ವ್ಯವಹಾರದಲ್ಲಿ ವಂಚನೆ ಮಾಡಿದ್ದಾರೆ ಎಂಬ ವಿಚಾರ ತಿಳಿದ ಪತ್ನಿ ತನ್ನ ತಾಯಿಯೊಂದಿಗೆ ಸೇರಿ ಗಂಡನನ್ನೇ ಕೊಂದ ಘಟನೆ ಬೆಂಗಳೂರಿನ‌ಲ್ಲಿ ನಡೆದಿದೆ. ಮೃತ ವ್ಯಕ್ತಿಯ ಶವ ಕಾರಿನಲ್ಲಿ ಪತ್ತೆಯಾದ ಹಿನ್ನೆಲೆ ಈ ಘಟನೆ ಬೆಳಕಿಗೆ ಬಂದಿದೆ. 37 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ ಹೆಂಡತಿಯಿಂದಲೇ ಕೊಲೆಯಾದವರು.

ಈ ಪ್ರಕರಣದ ಪ್ರಾಥಮಿಕ ತನಿಖೆಯ ಪ್ರಕಾರ ಆರೋಪಿಗಳು ಲೋಕನಾಥ್ ಅವರಿಗೆ ಆಹಾರದಲ್ಲಿ ನಿದ್ದೆ ಮಾತ್ರೆ ಮಿಶ್ರಣ ಮಾಡಿ ಕೊಟ್ಟಿದ್ದರು. ಆತ ನಿದ್ದೆ ಮಾಡಿದ ಬಳಿಕ ಆತನನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾರೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿ‌ದ್ದಾರೆ.

ಮಾರ್ಚ್ 22 ರಂದು ಲೋಕನಾಥ್ ಅವರ ಶವ ಇರುವ ಕಾರನ್ನು ಚಿಕ್ಕಬಾಣಾವರ ಬಳಿ ಜನರು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸ್ಯಾಂಕಿ ಕೆರೆಯಲ್ಲಿ ನಡೆದ ಐತಿಹಾಸ...