ಭಾರತ, ಏಪ್ರಿಲ್ 17 -- ವಿಜಯಪುರ: 2026ರಲ್ಲಿ ನಡೆಯುವ ಏಷ್ಯನ್ ಗೇಮ್ಸ್ಗೆ ತಯಾರಿ ನಡೆಸುತ್ತಿರುವ ಬಡ ಪ್ರತಿಭಾವಂತ ಕ್ರೀಡಾಪಟುವಿಗೆ ಹೆಚ್ಚಿನ ತರಬೇತಿಗೆ ಬಿಎಲ್ಡಿಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂಬಿ ಪಾಟೀಲ್ ಅವರು ಆರ್ಥಿಕ ನೆರವು ನೀಡುವ ಮೂಲಕ ಓಟಗಾರರ ಕನಸು ನನಸಾಗಲು ಸಹಾಯ ಹಸ್ತ ಚಾಚಿದ್ಧಾರೆ. ಸಂಸ್ಥೆಯ ಅಧ್ಯಕ್ಷರ ಆಶಯದಂತೆ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಸುನೀಲ್ ಗೌಡ ಪಾಟೀಲ್ ಇಂದು (ಏಪ್ರಿಲ್ 17) ನಗರದಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ತಿಕೋಟಾ ತಾಲೂಕಿನ ಬಾಬಾನಗರದ ಯುವ ಕ್ರೀಡಾಪಟು ಎಂಡಿ ಪೈಗಂಬರ್ ಗೌಂಡಿ ಅವರಿಗೆ ಆರ್ಥಿಕ ನೆರವಿನ ಚೆಕ್ ವಿತರಿಸಿದ್ದಾರೆ.
ಈ ಕ್ರೀಡಾಪಟು ಏಷಿಯನ್ ಗೇಮ್ಸ್ಗೆ ತಯಾರಿ ನಡೆಸುತ್ತಿದ್ದು, ಹೆಚ್ಚಿನ ತರಬೇತಿಗಾಗಿ ಕೇರಳದಲ್ಲಿರುವ ಅಂತಾರಾಷ್ಟ್ರೀಯ ಸಲೀಂ ಶೇಕ್ ಅಕಾಡೆಮಿಯಲ್ಲಿ ತರಬೇತಿ ಪಡೆಯಲು ಸೇರ್ಪಡೆಯಾಗಿದ್ದಾರೆ. ಇವರಿಗೆ ಅಥ್ಲೇಟಿಕ್ ತರಬೇತಿಗೆ ಅಗತ್ಯವಾಗಿರುವ ಕ್ರೀಡಾ ಸಲಕರಣೆ, ವಸತಿ ಮತ್ತಿತರ ಶುಲ್ಕಕ್ಕೆ ಒಟ್ಟು 4.60 ಲಕ್ಷ ಅಗತ್ಯವಿದೆ. ಇದರ ಮೊದಲ ಕ...
Click here to read full article from source
To read the full article or to get the complete feed from this publication, please
Contact Us.