ಭಾರತ, ಏಪ್ರಿಲ್ 17 -- ವಿಜಯಪುರ: 2026ರಲ್ಲಿ ನಡೆಯುವ ಏಷ್ಯನ್ ಗೇಮ್ಸ್​ಗೆ ತಯಾರಿ ನಡೆಸುತ್ತಿರುವ ಬಡ ಪ್ರತಿಭಾವಂತ ಕ್ರೀಡಾಪಟುವಿಗೆ ಹೆಚ್ಚಿನ ತರಬೇತಿಗೆ ಬಿಎಲ್​ಡಿಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂಬಿ ಪಾಟೀಲ್ ಅವರು ಆರ್ಥಿಕ ನೆರವು ನೀಡುವ ಮೂಲಕ ಓಟಗಾರರ ಕನಸು ನನಸಾಗಲು ಸಹಾಯ ಹಸ್ತ ಚಾಚಿದ್ಧಾರೆ. ಸಂಸ್ಥೆಯ ಅಧ್ಯಕ್ಷರ ಆಶಯದಂತೆ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಸುನೀಲ್​ ಗೌಡ ಪಾಟೀಲ್ ಇಂದು (ಏಪ್ರಿಲ್ 17) ನಗರದಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ತಿಕೋಟಾ ತಾಲೂಕಿನ ಬಾಬಾನಗರದ ಯುವ ಕ್ರೀಡಾಪಟು ಎಂಡಿ ಪೈಗಂಬರ್ ಗೌಂಡಿ ಅವರಿಗೆ ಆರ್ಥಿಕ ನೆರವಿನ ಚೆಕ್ ವಿತರಿಸಿದ್ದಾರೆ.

ಈ ಕ್ರೀಡಾಪಟು ಏಷಿಯನ್ ಗೇಮ್ಸ್​ಗೆ ತಯಾರಿ ನಡೆಸುತ್ತಿದ್ದು, ಹೆಚ್ಚಿನ ತರಬೇತಿಗಾಗಿ ಕೇರಳದಲ್ಲಿರುವ ಅಂತಾರಾಷ್ಟ್ರೀಯ ಸಲೀಂ ಶೇಕ್ ಅಕಾಡೆಮಿಯಲ್ಲಿ ತರಬೇತಿ ಪಡೆಯಲು ಸೇರ್ಪಡೆಯಾಗಿದ್ದಾರೆ. ಇವರಿಗೆ ಅಥ್ಲೇಟಿಕ್ ತರಬೇತಿಗೆ ಅಗತ್ಯವಾಗಿರುವ ಕ್ರೀಡಾ ಸಲಕರಣೆ, ವಸತಿ ಮತ್ತಿತರ ಶುಲ್ಕಕ್ಕೆ ಒಟ್ಟು 4.60 ಲಕ್ಷ ಅಗತ್ಯವಿದ್ದು, ಇದರ ಮೊದಲ...