ಭಾರತ, ಜನವರಿ 31 -- ಮಂಗಳೂರು: ಭಾರತದ ಅತೀ ಶ್ರೀಮಂತ ದೇವಸ್ಥಾನ ಕೇರಳದ ತಿರುವನಂತಪುರಂನ ಅನಂತಪದ್ಮನಾಭ ಕ್ಷೇತ್ರದ ಮಹಾಪ್ರಧಾನ ಅರ್ಚಕರಾಗಿ ದಕ್ಷಿಣಕನ್ನಡದ ಅರ್ಚಕರು ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿ ಸತ್ಯನಾರಾಯಣ ತೋಡ್ತಿಲ್ಲಾಯ (45) ಇದೀಗ ದೇಶದ ಅತೀ ಶ್ರೀಮಂತ ದೇವಸ್ಥಾನಕ್ಕೆ ಮಹಾ ಪ್ರಧಾನ ಅರ್ಚಕರಾಗಿ ಆಯ್ಕೆಯಾಗಿದ್ದು, ಗುರುವಾರವೇ ಕಾರ್ಯಭಾರ ಸ್ವೀಕರಿಸಿದರು.

ಬೆಳ್ತಂಗಡಿಯ ಕೊಕ್ಕಡದ ದಿ. ಸುಬ್ರಾಯ‌ ತೊಡ್ತಿಲ್ಲಾಯರ‌ ಮಗನಾಗಿರುವ ಸತ್ಯನಾರಾಯಣ ತೋಡ್ತಿಲ್ಲಾಯ, ದೇವಸ್ಥಾನದಿಂದ ನೀಡಲಾಗುವ ಛತ್ರಿ ಮರ್ಯಾದೆ‌ ಸ್ವೀಕರಿಸುವ ಮಹಾ ಪ್ರಧಾನ ಅರ್ಚಕ‌ ಸ್ಥಾನವನ್ನು ಅಲಂಕರಿಸಲಿದ್ದಾರೆ. ಇನ್ನು ಇವರ ತಂದೆ ದಿ. ಸುಬ್ರಾಯ ತೊಡ್ತಿಲ್ಲಾಯರೂ ಕೂಡ ಅನಂತ ಪದ್ಮನಾಭ ಕ್ಷೇತ್ರದಲ್ಲಿ‌ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು.

ಭಾರತದ ಅತೀ ಶ್ರೀಮಂತ ದೇವಸ್ಥಾನ ಕೇರಳದ ತಿರುವನಂತ ಪುರ ಶ್ರೀ ಅನಂತ ಪದ್ಮನಾಭ ಸ್ವಾಮಿಯ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಲು ಭಾಗ್ಯ ದೊರಕುವುದು ಅಂದ್ರೆ ವೈಕುಂಠದಲ್ಲಿ ದೇವರನ್ನ ಸ...