ಭಾರತ, ಜೂನ್ 11 -- ತುಮಕೂರು: ನಗರದಲ್ಲಿ ವಿವಿಧ ಇಲಾಖೆಗಳಡಿ ಕಾರ್ಯ ನಿರ್ವಹಿಸುತ್ತಿರುವ 58 ವಿದ್ಯಾರ್ಥಿ ನಿಲಯಗಳ ಜೊತೆಗೆ ಹೆಚ್ಚುವರಿಯಾಗಿ 6 ಹೊಸ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದರು.

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ನಗರದ ಹೊರವಲಯ ಮೈದಾಳ ರಸ್ತೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸ್ನಾತಕೋತ್ತರ ಮಹಿಳೆಯರ ವಿದ್ಯಾರ್ಥಿ ನಿಲಯಕ್ಕೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಹೆಚ್ಚುವರಿಯಾಗಿ ಮಂಜೂರಾಗಿರುವ 6 ವಿದ್ಯಾರ್ಥಿ ನಿಲಯಗಳನ್ನು ಪ್ರಸ್ತುತ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿದ್ದು, ಶೀಘ್ರವೇ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಸಚಿವ ಪರಮೇಶ್ವರ ತಿಳಿಸಿದರು.

ಇಂಜಿನಿಯ...