ಭಾರತ, ಫೆಬ್ರವರಿ 25 -- ತುಮಕೂರು: ಇತಿಹಾಸ ಪ್ರಸಿದ್ದ ಹೆತ್ತೇನಹಳ್ಳಿಯ ಶ್ರೀಮಾರಮ್ಮ ಆದಿಶಕ್ತಿ ದೇವಿಯ ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಶ್ರೀ ಅಮ್ಮನವರ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಮಂಗಳವಾರ (ಫೆ.25) ಮುಂಜಾನೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಮುಂಜಾನೆ ನಡೆದ ಹೆತ್ತೇನಹಳ್ಳಿಯಮ್ಮನ ರಥೋತ್ಸವಕ್ಕೆ ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತ ಸಮೂಹ ಸಾಕ್ಷಿಯಾಯಿತು.

ತುಮಕೂರು ತಾಲ್ಲೂಕಿನ ಗೂಳೂರು ಹೋಬಳಿಯ ಹೆತ್ತೇನಹಳ್ಳಿ, ಕೈದಾಳ, ಗೂಳೂರು, ಕಂಭತ್ತನಹಳ್ಳಿ, ರಂಗಯ್ಯನಪಾಳ್ಯ, ಚಿಕ್ಕಸಾರಂಗಿ, ನರುಗನಹಳ್ಳಿ, ಮಾಯಣ್ಣ ಗೌಡನ ಪಾಳ್ಯ ಸೇರಿದಂತೆ ಈ ಭಾಗದ ಹಳ್ಳಿಗಳಲ್ಲಿ ಹೆತ್ತೇನಹಳ್ಳಿಯಮ್ಮನ ಜಾತ್ರೆಗೆ ವಿಶೇಷವಾಗಿಯೇ ಭಕ್ತ ಸಮೂಹ ಸಜ್ಜಾಗುತ್ತಾರೆ. ಅದರಂತೆ ಸೋಮವಾರ ಇಡೀ ದಿನ ಭಕ್ತರು ಉಪವಾಸ ವ್ರತ ಮಾಡಿ ಮುಂಜಾನೆ ಅಗ್ನಿಕೊಂಡ ಹಾಯ್ದು ಅಮ್ಮನವರಿಗೆ ಹರಕೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.

ಈ ಭಾಗದ ಹೆಣ್ಣು ಮಕ್ಕಳು ಅಮ್ಮನವರಿಗೆ ಬಾಯಿ ಬೀಗದ ಹರಕೆ ತೀರಿಸುವ ಸಂಪ್ರದಾಯ ಹಿಂದ...