ಭಾರತ, ಮೇ 26 -- ತುಮಕೂರು: ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳಿಗೆ ಮಾರಕವಾಗಲಿರುವ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆ ವಿರುದ್ಧ ಜಿಲ್ಲೆಯಾದ್ಯಂತ ಜನರನ್ನು ಸಂಘಟಿಸಿ ಹೋರಾಟ ತೀವ್ರಗೊಳಿಸುವುದು ಹಾಗೂ ಕಾನೂನು ಹೋರಾಟ ಮಾಡಿ ಕೆನಾಲ್ ಕಾಮಗಾರಿಗೆ ತಡೆಯಾಜ್ಞೆ ತರುವ ಪ್ರಯತ್ನ ಮಾಡಲು ಸೋಮವಾರ ನಗರದಲ್ಲಿ ನಡೆದ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಹೋರಾಟ ಸಮಿತಿ ಸಭೆ ನಿರ್ಣಯ ಮಾಡಿತು.
ವಿವಿಧ ಪಕ್ಷಗಳ ಮುಖಂಡರು, ರೈತ ಸಂಘ, ಹಲವು ಸಂಘಟನೆಗಳ ಪ್ರಮುಖರು ಸೇರಿದ್ದ ಸಭೆಯಲ್ಲಿ ಈ ತಿಂಗಳ 31 ರಂದು ಲಿಂಕ್ ಕೆನಾಲ್ ಕಾಮಗಾರಿ ನಡೆಯುವ ಸ್ಥಳದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಮುತ್ತಿಗೆ ಹಾಕುವ ಬೃಹತ್ ಹೋರಾಟ ನಡೆಸಲು ತೀರ್ಮಾನಿಸಲಾಯಿತು.
ತೆವಡೆಹಳ್ಳಿ ಮಠದ ಗೋಸಲ ಚನ್ನಬಸವೇಶ್ವರ ಸ್ವಾಮೀಜಿ, ಕುಪ್ಪೂರು ಗದ್ದುಗೆ ಮಠದ ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮೀಜಿ, ಗೊಲ್ಲಹಳ್ಳಿ ಮಠದ ವಿಭವ ವಿದ್ಯಾಶಂಕರ ಸ್ವಾಮೀಜಿ, ರೇವಣಸಿದ್ದೇಶ್ವರ ಮಠದ ಬಿಂದು ಶೇಖರ ಒಡೆಯರ್ ಸ್ವಾಮೀಜಿ ಭಾಗವಹಿಸಿದ್ದರು.
ನಮ್ಮ ಜಿಲ್ಲೆಯ ಪಾಲಿನ ಹ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.