Bengaluru, ಮೇ 20 -- ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಮಂಗಳವಾರ ಮುಂಜಾನೆಯಿಂದಲೇ ಬಿಟ್ಟು ಬಿಡದೆ ಸುರಿದ ಮಳೆಯಿಂದಾಗಿ ಜನ ಹೈರಾಣಾಗಿದ್ದಾರೆ. ಕಳೆದ 2 ದಿನಗಳಲ್ಲಿ ತುಮಕೂರು ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ವರುಣ ಅಬ್ಬರಿಸಿದ್ದು, ತಗ್ಗು ಪ್ರದೇಶಗಳು, ಕೆಲ ಬಡಾವಣೆಗಳ ರಸ್ತೆಗಳು, ತೋಟಗಳು ಜಲಾವೃತಗೊಂಡಿವೆ. ಮಂಗಳವಾರ ಮುಂಜಾನೆಯಿಂದಲೇ ಮಳೆಯಾಗಿದ್ದು, ದಿನನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಸರ್ಕಾರಿ ನೌಕರರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ತೆರಳಲು ಪರದಾಡುವಂತಾಯಿತು.
ಮುಂಜಾನೆಯಿಂದ ಆರಂಭವಾದ ಮಳೆ ಬೆಳಗ್ಗೆ 9.30 ಗಂಟೆಯಾದರೂ ಸುರಿಯುತ್ತಿದ್ದರಿಂದ ಮಳೆಯಲ್ಲೇ ಸರ್ಕಾರಿ ನೌಕರರು, ಕಾಲೇಜು ವಿದ್ಯಾರ್ಥಿಗಳು ಜರ್ಕಿನ್ ಧರಿಸಿ ಛತ್ರಿಗಳನ್ನು ಹಿಡಿದು ತೆರಳುತ್ತಿದ್ದ ದೃಶ್ಯ ಕಂಡು ಬಂದವು. ನಗರದ ದಿಬ್ಬೂರಿಗೆ ಸಂಪರ್ಕ ಹೊಂದಿರುವ ಗಾರ್ಡನ್ ರಸ್ತೆಯಲ್ಲಿ ಮ್ಯಾನ್ ಹೋಲ್ ತುಂಬಿ ಕೊಳಚೆ ನೀರು ಮಳೆ ನೀರಿನೊಂದಿಗೆ ರಸ್ತೆಯಲ್ಲಿ ಹರಿಯುತ್ತಿರು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.