ಭಾರತ, ಮಾರ್ಚ್ 7 -- ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 2022 ಹಾಗೂ 2023 ಮತ್ತು 2024 ಈ ಮೂರು ವರ್ಷಗಳ ಸಾಲಿನ ಪ್ರಶಸ್ತಿಯನ್ನು 9 ಮಂದಿ ಸಾಧಕರಿಗೆ ಘೋಷಿಸಲಾಗಿದೆ.

2022ನೇ ಸಾಲಿನ ಸಂಶೋಧನೆ ಹಾಗೂ ಸಾಹಿತ್ಯ ಕ್ಷೇತ್ರದ ಪ್ರಶಸ್ತಿಗೆ ಡಾ. ರಘಪತಿ ಕೆಮ್ತೂರು (71). ಇದೇ ಸಾಲಿನ ತುಳು ನಾಟಕ ಸಿನಿಮಾ ಕ್ಷೇತ್ರದ ಪ್ರಶಸ್ತಿಗೆ ಶ್ರೀಮತಿ ರತ್ನಮಾಲ ಪುರಂದರ ಬೆಂಗಳೂರು (65), ಜಾನಪದ ಕ್ಷೇತ್ರದ ಪ್ರಶಸ್ತಿಗೆ ಶ್ರೀ ಪ್ರಭಾಕರ ಶೇರಿಗಾರ ಉಡುಪಿ (70) ಆಯ್ಕೆಯಾಗಿದ್ದಾರೆ.

2023ನೇ ಸಾಲಿನ ತುಳು ಸಾಹಿತ್ಯ ಕ್ಷೇತ್ರದ ಪ್ರಶಸ್ತಿಗೆ ಸಿಮಂತೂರು ಚಂದ್ರಹಾಸ ಸುವರ್ಣ ಮುಂಬಯಿ (70) ಆಯ್ಕೆಯಾಗಿದ್ದಾರೆ. ಇದೇ ಸಾಲಿನ ನಾಟಕ ಕ್ಷೇತ್ರದ ಪ್ರಶಸ್ತಿಗೆ ನೆಕ್ಕಿದ ಪುಣಿ ಗೋಪಾಲಕೃಷ್ಣ ಬೆಂಗಳೂರು (77) ಆಯ್ಕೆಯಾಗಿದ್ದಾರೆ. ಜಾನಪದ ಕ್ಷೇತ್ರದ ಪ್ರಶಸ್ತಿಗೆ ಲಕ್ಷ್ಮಣ ಕಾಂತ ಕಣಂತೂರು (65) ಆಯ್ಕೆಯಾಗಿದ್ದಾರೆ.

2024ನೇ ಸಾಲಿನ ಸಾಹಿತ್ಯ ಕ್ಷೇತ್ರದ ಪ್ರಶಸ್ತಿಗೆ ಶ್ರೀ ಯಶವಂತ ಬೋಳೂರು(70) ಆಯ್ಕ...