ಭಾರತ, ಏಪ್ರಿಲ್ 30 -- ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರನ್ನಾಗಿ ಎಂ ಮಹೇಶ್ವರ ರಾವ್ ಅವರನ್ನು ನೇಮಕ ಮಾಡಲಾಗಿದೆ. ಇವರು ಬಿಎಂಆರ್ಸಿಎಲ್ ವ್ಯವಸ್ಥಾಪಕ (ನಮ್ಮ ಮೆಟ್ರೋ) ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಬಿಬಿಎಂಪಿ ಜವಾಬ್ದಾರಿಯನ್ನೂ ನಿರ್ವಹಿಸಲಿದ್ದಾರೆ. ಇದುವರೆಗೂ ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ನಗರಾಭಿವೃದ್ಧಿ ಇಲಾಖೆ ಹಾಗೂ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಉಮಾಶಂಕರ್ ಎಸ್ಆರ್ ಏಪ್ರಿಲ್ 30ರಂದು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ತುಷಾರ್ ಗಿರಿನಾಥ್ ಅವರನ್ನು ಏಪ್ರಿಲ್ 30ರಿಂದ ಜಾರಿಗೆ ಬರುವಂತೆ ನಗರಾಭಿವೃದ್ಧಿ ಇಲಾಖೆ ಹಾಗೂ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಬಿಬಿಎಂಪಿಯ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಕಳೆದ ಎರಡೂವರೆ ವರ್ಷಗಳಿಂದ ಸೇವೆ ಸಲ್ಲಿಸಿದ್ದರು. ಮಹೇಶ್ವರ್ ರಾವ್ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ಅವರಿಗೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.