ಭಾರತ, ಮಾರ್ಚ್ 5 -- ಐಸಿಸಿ ಚಾಂಪಿಯನ್ಸ್‌ ಟ್ರೋಫಿ 2025ರ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್‌ ತಂಡವು 50 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಭಾನುವಾರ (ಮಾರ್ಚ್‌ 9) ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಭಾರತಕ್ಕೆ ಮತ್ತೊಮ್ಮೆ ನ್ಯೂಜಿಲೆಂಡ್‌ ತಂಡ ಎದುರಾಳಿಯಾಗಲಿದೆ. ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕಿವೀಸ್‌ ಪರ ರಚಿನ್‌ ರವೀಂದ್ರ ಹಾಗೂ ಕೇನ್‌ ವಿಲಿಯಮ್ಸನ್ ಸ್ಫೋಟಕ ಶತಕ ಹಾಗೂ ಬೌಲಿಂಗ್‌ನಲ್ಲಿ ನಾಯಕ ಮಿಚೆಲ್‌ ಸ್ಯಾಂಟ್ನರ್‌ ಮಾರಕ ದಾಳಿ ನೆರವಿಂದ ಕಿವೀಸ್‌ ಚಾಂಪಿಯನ್ಸ್‌ ಟ್ರೋಫಿ ಇತಿಹಾಸದಲ್ಲಿ ಎರಡನೇ ಬಾರಿ ಫೈನಲ್‌ ಪ್ರವೇಶಿಸಿದೆ.

2000ದಲ್ಲಿ ನಡೆದಿದ್ದ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ನಲ್ಲಿಯೂ ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗಿದ್ದವು. ಆದರೆ ಭಾರತ ತಂಡ ಸೋಲು ಕಂಡಿತ್ತು. ಮತ್ತೊಂದೆಡೆ ಚೊಚ್ಚಲ ಆವೃತ್ತಿಯ ಚಾಂಪಿಯನ್ಸ್‌ ಟ್ರೋಫಿಯ ಚಾಂಪಿಯನ್‌ ತಂಡ ದಕ್ಷಿಣ ಆಫ್ರಿಕಾ, ಅದಾದ ಬಳಿಕ ಇದುವರೆಗೂ ಫೈನಲ್‌ ತಲುಪಿಲ್ಲ.

ಸೆಮಿಫೈನಲ...