ಭಾರತ, ಮಾರ್ಚ್ 7 -- ಮಂಗಳೂರು: ಮಂಗಳೂರು ಹೊರವಲಯದ ಫರಂಗಿಪೇಟೆಯಿಂದ ಫೆ.25ರಂದು ನಾಪತ್ತೆಯಾಗಿರುವ ಪಿಯುಸಿ ವಿದ್ಯಾರ್ಥಿ ದಿಗಂತ್ ಹುಡುಕಿಕೊಡಲು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲಾಗಿದೆ. ಈಗಾಗಲೇ ಹೈಕೋರ್ಟ್ ದ್ವಿಸದಸ್ಯ ವಿಭಾಗೀಯ ಪೀಠದಲ್ಲಿ ವಕೀಲರಾದ ಸಚಿನ್ ನಾಯಕ್, ಅಕ್ಷಯ್ ಆಳ್ವ ಮತ್ತು ಅಖಿಲೇಶ್ವರಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ನಾಪತ್ತೆಯಾಗಿ ಹನ್ನೊಂದು ದಿನಗಳಾದರೂ ದಿಗಂತ್ ಸುಳಿವಿಲ್ಲದ ಹಿನ್ನೆಲೆಯಲ್ಲಿ ತನಿಖೆ ತೀವ್ರಗತಿಯಲ್ಲಿ ಸಾಗುತ್ತಿದೆ. ಇದರ ನಡುವೆ ನಾಪತ್ತೆಯಾಗಿರುವ ಮಗನನ್ನು ಎಲ್ಲಿದ್ದರೂ ಹುಡುಕಿಕೊಡಿಸುವಂತೆ ನ್ಯಾಯಾಲಯದ ಮೊರೆ ಹೋಗಲಾಗಿದೆ.

ದಿಗಂತ್ ತಂದೆ ಪದ್ಮನಾಭ ಹೆಸರಲ್ಲಿ ಈ ಅರ್ಜಿ ಸಲ್ಲಿಸಲಾಗಿದ್ದು, ಫೆ.25ರಂದು ನಾಪತ್ತೆಯಾಗಿದ್ದ ದಿಗಂತ್ ಇದುವರೆಗೂ ಪತ್ತೆಯಾಗದ ಹಿನ್ನೆಲೆಯಲ್ಲಿ ಕೂಲಂಕುಷವಾಗಿ ತನಿಖೆ ನಡೆಸಿ ಆತನನ್ನು ಹುಡುಕಿಕೊಡುವಂತೆ ರಾಜ್ಯ ಸರ್ಕಾರ, ಡಿಜಿಪಿ, ಎಸ್ಪಿ, ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಅವರಿಗೆ ಮನವಿ ಮಾಡಲಾಗಿದೆ. ಮುಂದಿನ ವಿಚಾರಣೆಯನ್ನ...