ಭಾರತ, ಮಾರ್ಚ್ 7 -- ಮಂಗಳೂರು: ಮಂಗಳೂರು ಹೊರವಲಯದ ಫರಂಗಿಪೇಟೆಯಿಂದ ಫೆ.25ರಂದು ನಾಪತ್ತೆಯಾಗಿರುವ ಪಿಯುಸಿ ವಿದ್ಯಾರ್ಥಿ ದಿಗಂತ್ ಹುಡುಕಿಕೊಡಲು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲಾಗಿದೆ. ಈಗಾಗಲೇ ಹೈಕೋರ್ಟ್ ದ್ವಿಸದಸ್ಯ ವಿಭಾಗೀಯ ಪೀಠದಲ್ಲಿ ವಕೀಲರಾದ ಸಚಿನ್ ನಾಯಕ್, ಅಕ್ಷಯ್ ಆಳ್ವ ಮತ್ತು ಅಖಿಲೇಶ್ವರಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ನಾಪತ್ತೆಯಾಗಿ ಹನ್ನೊಂದು ದಿನಗಳಾದರೂ ದಿಗಂತ್ ಸುಳಿವಿಲ್ಲದ ಹಿನ್ನೆಲೆಯಲ್ಲಿ ತನಿಖೆ ತೀವ್ರಗತಿಯಲ್ಲಿ ಸಾಗುತ್ತಿದೆ. ಇದರ ನಡುವೆ ನಾಪತ್ತೆಯಾಗಿರುವ ಮಗನನ್ನು ಎಲ್ಲಿದ್ದರೂ ಹುಡುಕಿಕೊಡಿಸುವಂತೆ ನ್ಯಾಯಾಲಯದ ಮೊರೆ ಹೋಗಲಾಗಿದೆ.
ದಿಗಂತ್ ತಂದೆ ಪದ್ಮನಾಭ ಹೆಸರಲ್ಲಿ ಈ ಅರ್ಜಿ ಸಲ್ಲಿಸಲಾಗಿದ್ದು, ಫೆ.25ರಂದು ನಾಪತ್ತೆಯಾಗಿದ್ದ ದಿಗಂತ್ ಇದುವರೆಗೂ ಪತ್ತೆಯಾಗದ ಹಿನ್ನೆಲೆಯಲ್ಲಿ ಕೂಲಂಕುಷವಾಗಿ ತನಿಖೆ ನಡೆಸಿ ಆತನನ್ನು ಹುಡುಕಿಕೊಡುವಂತೆ ರಾಜ್ಯ ಸರ್ಕಾರ, ಡಿಜಿಪಿ, ಎಸ್ಪಿ, ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅವರಿಗೆ ಮನವಿ ಮಾಡಲಾಗಿದೆ. ಮುಂದಿನ ವಿಚಾರಣೆಯನ್ನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.