ಭಾರತ, ಫೆಬ್ರವರಿ 26 -- ಮಂಗಳೂರು: ಕರ್ನಾಟಕದಲ್ಲಿ ಈಗಾಗಲೇ ಬೇಸಿಗೆಯ ಬಿಸಿ ಆರಂಭವಾಗಿದೆ. ಅದರಲ್ಲೂ ಕರಾವಳಿ ಕರ್ನಾಟಕದ ಜನತೆ ಸೂರ್ಯನ ಶಾಖಕ್ಕೆ ನಲುಗಿದ್ದು, ಬಿಸಿ ವಾತಾವರಣದಿಂದ ಬೆಂದಿದ್ದಾರೆ. ಈ ನಡುವೆ ಇನ್ನೂ ಒಂದು ದಿನ ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಅಲೆ ಇರುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ, ಇಂದು (ಫೆ.26) ಮಾತ್ರವಲ್ಲದೆ ನಾಳೆ (ಫೆ.27) ಕೂಡಾ ಉಷ್ಣ ಅಲೆ ಬೀಸಲಿದೆ. ಹೀಗಾಗಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ನೀಡಿದೆ.

ಫೆ. 26 ಮತ್ತು 27 ರಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಗಮನಾರ್ಹ ಏರಿಕೆ ಉಂಟಾಗಲಿದೆ. ಬಿಸಿ ಮತ್ತು ಆರ್ದ್ರ ಪರಿಸ್ಥಿತಿ ಉಂಟಾಗಬಹುದು ಎಂದು ಎಚ್ಚರಿಕೆ ನೀಡಿದೆ. ಗರಿಷ್ಠ ತಾಪಮಾನವು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ಜನರು ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಸಲಹೆ ನೀಡಿದೆ.

ಕಳೆದ ಕೆಲವು ದಿನಗಳಿಂದ, ಕರಾವಳಿ ಕರ್ನ...