ಭಾರತ, ಮೇ 30 -- ಮಂಗಳೂರು: ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಹೇಳಿದ್ದಾರೆ.
ಮಂಗಳೂರಿನ ಎಸ್ಪಿ ಕಚೇರಿಯಲ್ಲಿ ಯತೀಶ್ ಎನ್. ಅವರಿಂದ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು.
ರೌಡಿ ಶೀಟರ್ ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗೋಹತ್ಯೆ, ಸಾಗಾಟ, ಮಾದಕ ಪದಾರ್ಥಗಳ ಸಾಗಾಟ, ಮಾರಾಟ, ಸೇವನೆ, ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.
ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.