ಭಾರತ, ಮಾರ್ಚ್ 7 -- Karnataka Budget 2025: ಕೊನೆಗೂ ಪುತ್ತೂರಿನಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಬೇಕು ಎಂಬ ಬೇಡಿಕೆಗೆ ಅಧಿಕೃತ ಮುದ್ರೆ ದೊರಕಿದೆ. ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಶುಕ್ರವಾರ ಪ್ರಸ್ತಾಪಿಸಿರುವುದು ಇದಕ್ಕೆ ಕಾರಣ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೇ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾಗಬೇಕು ಎಂಬುದು ಹಳೆಯ ಕನಸು. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟಿಗೆ ಮೆಡಿಕಲ್ ಕಾಲೇಜು ಪುತ್ತೂರಿನಲ್ಲಿ ಇದ್ದರೆ ಒಳ್ಳೆಯದು ಎಂಬುದು ಕಳೆದ ಏಳೆಂಟು ವರ್ಷಗಳಿಂದ ಕೇಳಿಬರುತ್ತಿರುವ ಮಾತು. ಇದೀಗ ಆ ಹೋರಾಟಕ್ಕೆ ಬಲ ಬಂದಿದ್ದು, ತಾರ್ಕಿಕ ಅಂತ್ಯ ದೊರಕುವ ಭರವಸೆಯೂ ಸಿಕ್ಕಿದೆ.

ರಾಜ್ಯ ಸರಕಾರ ಈ ಬಾರಿಯ ಬಜೆಟ್ ನಲ್ಲಿ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ಘೋಷಣೆ ಮಾಡಿದ್...