Bangalore, ಮಾರ್ಚ್ 31 -- ಬೆಂಗಳೂರು: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ. ಅದರಲ್ಲೂ ದೇಹದ ಪ್ರಮುಖ ಭಾಗಗಳ ದಾನವಂತೂ ಈಗ ದೊಡ್ಡದಾಗಿಯೇ ಬೆಳೆದಿದೆ. ಇದನ್ನು ವ್ಯವಸ್ಥಿತಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ. ಮತ್ತೊಬ್ಬರ ಬಾಳಿಗೆ ಬೆಳಕಾಗುವ ಮಹತ್ವದ ಯೋಜನೆಗೆ ಇಲಾಖೆ ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ತನ್ನ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ನವೀಕರಿಸಲು ಮತ್ತು ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಸಂಬಂಧ ಆದೇಶ ಕೂಡ ಹೊರಡಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ 125ನೇ ವರ್ಷಾಚರಣೆ ಸಂದರ್ಭದಲ್ಲಿಯೇ ಈ ಮಹತ್ವದ ಕೇಂದ್ರ ಇಲ್ಲಿ ಆರಂಭವಾಗುತ್ತಿರುವುದು ಮತ್ತೊಂದು ಗಮನಾರ್ಹ ಸಂಗತಿಯಾಗಿದೆ.

ಮೃತ ದಾನಿಗಳಿಂದ ಅಂಗಗಳನ್ನು ಸಂಗ್ರಹಿಸುವ ವಿಶೇಷ ಘಟಕವಾಗಿ ಕಾರ್ಯನಿರ್ವಹಿಸುತ್ತದೆ, ಈ ಕೇಂದ್ರದಲ್ಲಿ ಐಸಿಯು, ಶಸ್ತ್ರಚಿಕಿತ್ಸಾ ಕೊಠಡಿ, ಪ್ರಯೋಗಾಲಯ ಸೌಲಭ್ಯಗ...