Bangalore, ಫೆಬ್ರವರಿ 15 -- Bangalore Cyber Fraud: ಎಷ್ಟೇ ಜಾಗೃತಿ ಮೂಡಿಸಿದರೂ ಸೈಬರ್‌ ವಂಚನೆ ಪ್ರಕರಣಗಳು ಪದೇ ಪದೇ ವರದಿಯಾಗುತ್ತಲೇ ಇವೆ. ಬೆಂಗಳೂರಿನಲ್ಲಿ ಇದೇ ರೀತಿ ಸೈಬರ್‌ ವಂಚನೆಗೆ ಒಳಗಾಗಿದ್ದಾರೆ. ತಾವು ಸೂಚಿಸಿದ ರೀತಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ದೊರಕಲಿದೆ ಎಂದು ನಂಬಿಸಿ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 1.4 ಕೋಟಿ ರೂ ವಂಚಿಸಿರುವ ಸೈಬರ್‌ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಜಿ.ಪಿ. ನಗರದ ಏಳನೇ ಹಂತದ ನಿವಾಸಿಯಾಗಿರುವ ಎಂ.ಎಸ್.ದತ್ತರಾಮ್ ಎಂಬುವರು ದಕ್ಷಿಣ ವಿಭಾಗದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ-2008 ಹಾಗೂ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದತ್ತರಾಮ್ ಅವರು ಫೇಸ್‌ಬುಕ್‌ನಲ್ಲಿ ಬಂದಿದ್ದ ಜಾಹೀರಾತು ಗಮನಿಸಿ ಅದರ ಮೇಲೆ ಕ್ಲಿಕ್ ಮಾಡಿದ್ದರು. ಕೂಡಲೇ 'ವಿಐಪಿ ಡಿ-519' ಎಂಬ ಹೆಸರಿನ ವಾಟ್ಸ್ಆ್ಯಪ್ ಗುಂಪಿಗೆ ಅವರನ್ನು ಸೇರ್ಪಡೆ ಮಾ...