Bengaluru, ಏಪ್ರಿಲ್ 28 -- ಬೆಂಗಳೂರು: ದುಪ್ಪಟ್ಟು ಲಾಭ ನೀಡುವುದಾಗಿ ನಂಬಿಸಿ, ಸುಮಾರು 20 ಕ್ಕೂ ಹೆಚ್ಚು ಗ್ರಾಹಕರಿಂದ ಸುಮಾರು ರೂ. 84 ಲಕ್ಷ ಪಡೆದು ವಂಚಿಸಿದ ಆರೋಪದಡಿಯಲ್ಲಿ ಇಬ್ಬರ ವಿರುದ್ಧ ಉತ್ತರ ವಿಭಾಗದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇವರ ವಿರುದ್ಧ ಹೆಸರಘಟ್ಟ ಮುಖ್ಯ ರಸ್ತೆ ಎಜಿಬಿ ಲೇಔಟ್ ನಿವಾಸಿ ಅಶೋಕ್ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಪರಂ ಸಕ್ಲೇಜಾ ಮತ್ತು ಲತಾ ಎಂಬುವವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಬಿಎನ್ ಎಸ್ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀಗುರು ಮಾರ್ಕೆಟಿಂಗ್ ನಲ್ಲಿ ಮಾರಾಟ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದ ಅಶೋಕ್ ಗೆ ಆರೋಪಿಗಳ ಪರಿಚಯವಾಗಿದೆ. ಎಸ್ಜೆಆರ್ಇ ಎಂಬ ಕಂಪನಿ ದುಪ್ಪಟ್ಟು ಲಾಭ ಮಾಡಿಕೊಡಲಿದೆ ಎಂದು ತಿಳಿಸಿದ್ದಾರೆ. ಹಣ ಹೂಡಿಕೆ ಮಾಡಿಸಿದರೆ ಸಂಬಳದ ಜತೆಗೆ ಕಮಿಷನ್ ಕೊಡುವುದಾಗಿ ಆಮಿಷವೊಡ್ಡಿದ್ದಾರೆ. ಇದಕ್ಕೆ ಅಶೋಕ್ ಒಪ್ಪಿಕೊಂಡಿದ್ದಾರೆ. ನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.