ಭಾರತ, ಫೆಬ್ರವರಿ 3 -- CCL Season 10: 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ಗೆ ದಿನಗಣನೆ ಆರಂಭವಾಗಿದ್ದು, ದೇಶದ ಬೇರೆ ಬೇರೆ ಚಿತ್ರರಂಗದ ಸ್ಟಾರ್ ನಟರು ಫೆಬ್ರವರಿ 23 ರಿಂದ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯಲಿದ್ದಾರೆ. ಅದರ ಭಾಗವಾಗಿ ಫೆ, 2ರಂದು ದುಬೈನಲ್ಲಿ ಸಿಸಿಎಲ್‌ ಸೀಸನ್‌ 10ರ ಪ್ರೋಮೋ ಬಿಡುಗಡೆ ಆಗಿದೆ. ಬುರ್ಜ್ ಖಲೀಫಾದ ಕಟ್ಟಡದ ಮೇಲೆ ಸಿಸಿಎಲ್ ಪ್ರೋಮೋ ಝಲಕ್ ರಿಲೀಸ್‌ ಆಗಿದೆ.

ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡದಿಂದ ಕಿಚ್ಚ ಸುದೀಪ್, ಹಿಂದಿಯಿಂದ ಸೊಹೈಲ್ ಖಾನ್, ತಮಿಳು ಚಿತ್ರರಂಗದಿಂದ ಆರ್ಯ ಮತ್ತು ಜೀವಾ, ತೆಲುಗಿನಿಂದ ತಮನ್ ಮತ್ತು ಸುಧೀರ್ ಬಾಬು, ಬೆಂಗಾಲಿಯ ಜಿಸ್ಸು ಸೇನ್‌ಗುಪ್ತಾ , ಪಂಜಾಬ್‌ನ ಬುನ್ನು ಧಿಲ್ಲೋನ್ ಮತ್ತು ಸೋನು ಸೂದ್, ಮಲಯಾಳಂನಿಂದ ಇಂದ್ರಜಿತ್ ಸುಕುಮಾರನ್ ಮತ್ತು ಉನ್ನಿ ಮುಕುಂದನ್ ಸೇರಿದಂತೆ CCLನ ಎಲ್ಲಾ 8 ತಂಡಗಳ ನಾಯಕರು ಭಾಗಿಯಾಗಿದ್ದರು.

ಇದನ್ನೂ ಓದಿ: ಇದೇ 23ರಿಂದ ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌ ಶುರು; ಕರ್ನಾಟಕ ಬುಲ್ಡೋಜರ್ ತಂಡಕ್ಕೆ ಸು...