ಭಾರತ, ಮೇ 19 -- ಐಪಿಎಲ್ 18ನೇ ಆವೃತ್ತಿಯ ಪಂದ್ಯಾವಳಿಯ ಲೀಗ್ ಹಂತದ ಪಂದ್ಯಗಳು ಅಂತಿಮ ಹಂತಕ್ಕೆ ಬರುತ್ತಿದೆ. ಈಗಾಗಲೇ ಟೂರ್ನಿಯಲ್ಲಿ 3 ತಂಡಗಳು ಪ್ಲೇಆಫ್‌ ಹಂತಕ್ಕೆ ಪ್ರವೇಶಿಸಿದರೆ, 4 ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಅದರಲ್ಲಿ ಎರಡು ತಂಡಗಳು ನಡುವೆ ನಾಳೆ (ಮೇ 20) ಪಂದ್ಯ ನಡೆಯುತ್ತಿದೆ. ಟೂರ್ನಿಯಲ್ಲಿ ತೀರಾ ಕಳಪೆ ಪ್ರದರ್ಶನ ನೀಡುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮತ್ತು ರಾಜಸ್ಥಾನ ರಾಯಲ್ಸ್ (ಆರ್‌ಆರ್) ತಂಡಗಳು ಮಂಗಳವಾರ ನಡೆಯುವ ಪಂದ್ಯದಲ್ಲಿ ದೆಹಲಿಯಲ್ಲಿ ಕಣಕ್ಕಿಳಿಯಲಿದೆ. ಈ ಪಂದ್ಯ ತಟಸ್ಥ ಸ್ಥಳದಲ್ಲಿ ನಡೆಯಲಿದೆ. ಎರಡೂ ತಂಡಗಳು ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಆದರೆ, ಅಭಿಮಾನಿಗಳ ಕುತೂಹಲ ತಣಿಸಲು ಹಾಗೂ ಕನಿಷ್ಠ ಕೊನೆಯ ಪಂದ್ಯಗಳಲ್ಲಿ ಗೆಲುವಿನ ರುಚಿ ನೋಡುವ ಸಲುವಾಗಿ ತಂಡಗಳು ಆಡಲಿವೆ.

ಇದನ್ನೂ ಓದಿ | ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಯಾವ ತಂಡದ ವಿರುದ್ಧ ಎಷ್ಟು ರನ್ ಗಳಿಸಿದ್ದಾರೆ; ಈ ವಿಶಿಷ್ಟ ಸಾಧನೆ ಮಾಡಿದ ಏಕೈಕ ಆಟಗಾರ

Published by HT Digital Content Services with...