New Delhi, ಫೆಬ್ರವರಿ 8 -- Delhi CM Hunt: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ ಬಿಜೆಪಿ 45ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. 27 ವರ್ಷಗಳ ಬಳಿಕ ದೆಹಲಿಯಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕಿದೆ. 3 ಸಲ ಮುಖ್ಯಮಂತ್ರಿಯಾಗಿದ್ದ ಅರವಿಂದ್ ಕೇಜ್ರಿವಾಲ್‌ ಅವರನ್ನು 4089 ಮತಗಳ ಅಂತರದಲ್ಲಿ ಸೋಲಿಸಿದ ಪರ್ವೇಶ್ ವರ್ಮಾ ಈಗ ಎಲ್ಲರ ಗಮನಸೆಳೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ. ಆದಾಗ್ಯೂ, ದೆಹಲಿಯ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಿಲ್ಲ. ಶಾಸಕಾಂಗ ಪಕ್ಷದ ಸದಸ್ಯರು ಒಟ್ಟಾಗಿ ಪಕ್ಷದ ವರಿಷ್ಠರ ತೀರ್ಮಾನವನ್ನು ಅನುಷ್ಠಾನಗೊಳಿಸಬೇಕು. ಆದರೆ, ಈಗ ದೆಹಲಿಯ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಬಿಜೆಪಿಯ ನಾಯಕರ ನಡುವೆ ಪೈಪೋಟಿ ಶುರುವಾಗಿದೆ.

1) ಪರ್ವೇಶ್ ವರ್ಮಾ: ನವದೆಹಲಿ ಕ್ಷೇತ್ರದಲ್ಲಿ ಎಎಪಿ ಮುಖ್ಯಸ್ಥ, 3 ಸಲ ಮುಖ್ಯಮಂತ್ರಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನ...