Bangalore, ಫೆಬ್ರವರಿ 8 -- ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಸಮಯದಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಜನರು ಇನ್ನಿಲ್ಲದ ಉತ್ಸಾಹದಿಂದ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಬಿಜೆಪಿ ಬೆಂಬಲಿಗರು ಹರ್ಷೋದ್ಗಾರ, ಜೈಕಾರ ಹಾಕುತ್ತಿದ್ದಾರೆ. ಇದೇ ಸಮಯದಲ್ಲಿ ನೆಟ್ಟಿಗರು ಆಮ್‌ ಆದ್ಮಿಯ ಅರವಿಂದ ಕೇಜ್ರಿವಾಲ್‌ ಸೋಲನ್ನು ವಿಶ್ಲೇಷಣೆಯನ್ನೂ ಮಾಡುತ್ತಿದ್ದಾರೆ. ದೆಹಲಿ ಚುನಾವಣೆಯ ಅಧಿಕೃತ ಫಲಿತಾಂಶ ಬರುವ ಮುನ್ನವೇ ಮತ ಎಣಿಕೆಯ ಸಮಯದ ಮುನ್ನಡೆ, ಹಿನ್ನಡೆಯ ನಡುವೆ ಸೋಷಿಯಲ್‌ ಮೀಡಿಯಾದಲ್ಲಿ ನಗು ಉಕ್ಕಿಸುವ ಮೀಮ್ಸ್‌ಗಳ ಪ್ರವಾಹವೂ ಉಂಟಾಗಿದೆ. ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಎಎಪಿಯ ಮತ್ತೊಬ್ಬ ನಾಯಕ, ಮಾಜಿ ಡಿಸಿಎಂ ಅನೀಶ್ ಸಿಸೋಡಿಯಾ ಕೂಡ ಪರಾಭವಗೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಸೋಷಿಯಲ್‌ ಮೀಡಿಯಾದಲ್ಲಿ ಫೋಟೋ, ವಿಡಿಯೋ, ಜಿಫ್‌, ಬರಹಗಳನ್ನು ಹಾಕುತ್ತ ಸಂಭ್ರಮಿಸುತ್ತಿದ್ದಾರೆ. ಚುನಾವಣಾ ಆಯೋಗದ ವೆಬ್ ಸೈಟ್ ಟ್ರೆಂಡ್ ಪ್ರಕಾರ ಬಿಜೆಪಿ ಮುನ್ನಡೆಯಲ್ಲಿದೆ. ...