ಭಾರತ, ಫೆಬ್ರವರಿ 4 -- ದೆಹಲಿ ವಿಧಾನಸಭಾ ಚುನಾವಣೆ (Delhi assembly election) ಮೇಲೆ ದೇಶದ ಚಿತ್ತ ಹರಿದಿದೆ. ಫೆಬ್ರವರಿ 5ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅಖಾಡದಲ್ಲಿರುವ ಪಕ್ಷಗಳು ಸೋಮವಾರ ಸಂಜೆ (ಫೆ.3) ಬಿರುಸಿನ ಪ್ರಚಾರ ಮುಗಿಸಿವೆ. ಪ್ರಮುಖ ಪಕ್ಷಗಳ ನಾಯಕರು ಮತದಾರರನ್ನು ಸೆಳೆಯಲು ಬೃಹತ್‌ ರೋಡ್ ಶೋ, ಸಾರ್ವಜನಿಕ ಸಭೆ, ಪಾದಯಾತ್ರೆ ಮತ್ತು ಬೈಕ್ ರ‍್ಯಾಲಿ ನಡೆಸಿವೆ. ಪ್ರಧಾನಿ ನರೇಂದ್ರ ಮೋದಿ, ಎಎಪಿಯ ಅರವಿಂದ್ ಕೇಜ್ರಿವಾಲ್ ಮತ್ತು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಂಥ ಘಟಾನುಘಟಿ ನಾಯಕರು ರಾಷ್ಟ್ರ ರಾಜಧಾನಿಯಲ್ಲಿ ಪ್ರಚಾರದ ನೇತೃತ್ವ ವಹಿಸಿದ್ದರು. ಇದಕ್ಕೆ ಜನಸಾಮಾನ್ಯರ ಸ್ಪಂದನೆ ಹೇಗಿರಲಿದೆ ಎಂಬುದು ನಾಳೆ ತಿಳಿಯಲಿದೆ.

ದೆಹಲಿ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆಯು 2025ರ ಫೆಬ್ರುವರಿ 5ರ ಬುಧವಾರ ಒಂದೇ ಹಂತದಲ್ಲಿ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಲಿದೆ. ಫೆಬ್ರವರಿ 8ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಒಟ್ಟು 70 ವಿಧಾನಸಭಾ ಕ್ಷೇತ್ರಗಳಿರುವ ದೆಹಲಿಯಲ್...