ಭಾರತ, ಫೆಬ್ರವರಿ 10 -- ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ ಬಹಿರಂಗವಾಗಿದ್ದು ಹೊಸ ವಿಷಯವೇನಲ್ಲ. ರಾಜ್ಯಾಧ್ಯಕ್ಷ ಸ್ಥಾನದಿಂದ ಬಿಎಸ್‌ವೈ ಪುತ್ರ ಬಿವೈ ವಿಜಯೇಂದ್ರ ವಿರುದ್ಧ ಪ್ರತ್ಯೇಕ ಬಣ ರೂಪುಗೊಂಡಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ನೇತೃತ್ವದ ಬಣ ಮತ್ತೊಮ್ಮೆ ದೆಹಲಿ ಯಾತ್ರೆ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ರಾಘವೇಂದ್ರ ಕೆಳಗಿಳಿಸಿ ನೂತನ ಅಧ್ಯಕ್ಷರ ನೇಮಕಕ್ಕೆ ಯತ್ನಾಳ್‌ ಬಣ ಶತಾಯ ಗತಾಯ ಪ್ರಯತ್ನ ಮಾಡುತ್ತಿದೆ. ಇದಕ್ಕಾಗಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ಯತ್ನಾಳ್‌ ದೆಹಲಿಗೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮದೇ ಪಕ್ಷದ ನಾಯಕರ ಅಸಮಾಧಾನವು ವಿಜಯೇಂದ್ರ ನಿದ್ದೆಗೆಡಿಸಿದೆ. ತಮ್ಮ ಕುರ್ಚಿ ಉಳಿಸಿಕೊಳ್ಳುವ ಜತೆಗೆ, ಪಕ್ಷದ ಆಂತರಿಕ ಅಸಮಾಧಾನ ಶಮನಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಇದೀಗ ವಿಜಯೇಂದ್ರ ಮತ್ತು ಯತ್ನಾಳ್‌ ಇಬ್ಬರೂ ಕೇಂದ್ರ ಸಚಿವ ಸೋಮಣ್ಣ ಮನೆ ಪೂಜೆಯ ನೆಪದಲ್ಲಿ ದೆಹಲಿ ತಲುಪಿದ್ದಾರೆ. ಅಲ್ಲಿ ವರಿಷ್ಠರ ಭೇಟಿಯಾಗಿ ತಮ್ಮ ತಮ್ಮ ಬೇಡಿಕೆ ಇಡುವುದು ಬಹುತೇಕ ಖಚ...