ಭಾರತ, ಮೇ 9 -- ನವದೆಹಲಿ: ಭಾರತ-ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಗಡಿ ಉದ್ವಿಗ್ನತೆಯ ಹಿನ್ನೆಲೆ ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ರಸ್ತುತ ಆವೃತ್ತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಒಂದು ವಾರದ ಅವಧಿಗೆ ಸ್ಥಗಿತಗೊಳಿಸಲಾಗಿದೆ ಎಂದು ಬಿಸಿಸಿಐ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇದಕ್ಕೂ ಮುನ್ನ ಐಪಿಎಲ್ ಸ್ಥಗಿತದ ಕುರಿತು ಮಾಹಿತಿ ನೀಡಿತ್ತಾದರೂ ಎಲ್ಲಿಯವರೆಗೂ ಎಂದು ವಿವರಣೆ ನೀಡಿರಲಿಲ್ಲ. ಸಂಬಂಧಿತ ಐಪಿಎಲ್ ಅಧಿಕಾರಿಗಳು, ಫ್ರಾಂಚೈಸಿ ಮಾಲೀಕರ ಜತೆಗೆ ಸಮಾಲೋಚನೆ ನಡೆಸಿ ಪರಿಸ್ಥಿತಿಯ ಸಮಗ್ರ ಮೌಲ್ಯಮಾಪನದ ನಂತರ ಟೂರ್ನಿಯ ಹೊಸ ವೇಳಾಪಟ್ಟಿ ಮತ್ತು ಸ್ಥಳಗಳ ಬಗ್ಗೆ ಕುರಿತು ಮಾಹಿತಿ ಒದಗಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆದರೆ ಮುಂದಿನ ನಡೆ ಏನಿರಬಹುದು ಎಂಬುದು ಕುತೂಹಲ ಮೂಡಿಸಿದೆ.
ನಿರ್ಣಾಯಕ ಹಂತದಲ್ಲಿ ರಾಷ್ಟ್ರದೊಂದಿಗೆ ಬಿಸಿಸಿಐ ದೃಢವಾಗಿ ನಿಲ್ಲುತ್ತದೆ. ಭಾರತ ಸರ್ಕಾರ, ಸಶಸ್ತ್ರ ಪಡೆ ಮತ್ತು ದೇಶದ ಜನರೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ. ಇತ್ತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.