Bengaluru, ಏಪ್ರಿಲ್ 25 -- ಕೊಲೆಸ್ಟ್ರಾಲ್.. ಎಂಬ ಪದ ಕೇಳಿದರೆ ನಮಗೆ ಹೆಚ್ಚಾಗಿ ನಕಾರಾತ್ಮಕ ಚಿತ್ರಣವೇ ಕಣ್ಣ ಮುಂದೆ ಬರುತ್ತದೆ. ಯಾಕೆಂದರೆ ಕೊಬ್ಬಿನ ಅಂಶ ದೇಹದಲ್ಲಿ ಹೆಚ್ಚಾದರೆ ಅದರಿಂದ ಬಹಳಷ್ಟು ಸಮಸ್ಯೆ ಉಂಟಾಗುತ್ತದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಆದರೆ ಎಲ್ಲಾ ಕೊಲೆಸ್ಟ್ರಾಲ್ ಕೆಟ್ಟದ್ದಲ್ಲ ಎಂದು ನಿಮಗೆ ತಿಳಿದಿದೆಯೇ? ವಾಸ್ತವವಾಗಿ, ಆರೋಗ್ಯಕರ ಕೋಶಗಳನ್ನು ನಿರ್ಮಿಸಲು, ಹಾರ್ಮೋನುಗಳನ್ನು ಉತ್ಪಾದಿಸಲು ಮತ್ತು ಜೀರ್ಣಕ್ರಿಯೆಯನ್ನು ಬೆಂಬಲಿಸಲು ನಮ್ಮ ದೇಹಕ್ಕೆ ಕೊಲೆಸ್ಟ್ರಾಲ್ ಅಗತ್ಯವಿದೆ. ಒಳ್ಳೆಯ ಮತ್ತು ಕೆಟ್ಟ ಕೊಲೆಸ್ಟ್ರಾಲ್ ನಡುವೆ ಆರೋಗ್ಯಕರ ಸಮತೋಲನವನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ಅಲ್ಲದೆ, ಒಳ್ಳೆಯ ಕೊಲೆಸ್ಟ್ರಾಲ್ ಯಾವುದು ಮತ್ತು ಕೆಟ್ಟ ಕೊಲೆಸ್ಟ್ರಾಲ್ ಎಂದರೆ ಏನು ಎನ್ನುವ ಬಗ್ಗೆ ಇಲ್ಲಿದೆ ವಿವರಣೆ.

ಕೊಲೆಸ್ಟ್ರಾಲ್‌ನಲ್ಲಿ ಮುಖ್ಯವಾಗಿ ಎರಡು ವಿಧಗಳಿವೆ:

HDL (ಹೈ-ಡೆನ್ಸಿಟಿ ಲಿಪೊಪ್ರೋಟೀನ್) - ಇದು ಒಳ್ಳೆಯ ಕೊಲೆಸ್ಟ್ರಾಲ್. ಇದು ರಕ್ತದ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹ...