ಭಾರತ, ಜನವರಿ 28 -- ನಮ್ಮ ಜೀವತಾವಧಿಯನ್ನು ತಗ್ಗಿಸುವ ಅಥವಾ ಜೀವನದ ಗುಣಮಟ್ಟವನ್ನು ಕಡಿಮೆ ಮಾಡುವ ಆರೋಗ್ಯ ಸಮಸ್ಯೆಗಳಲ್ಲಿ ಹೈ ಕೊಲೆಸ್ಟ್ರಾಲ್ ಅಥವಾ ಹೈಪರ್ಲಿಪಿಡೆಮಿಯಾವೂ ಒಂದು. ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಹೃದ್ರೋಗ ಸೇರಿದಂತೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತಿದೆ. ಕೊಲೆಸ್ಟ್ರಾಲ್ ಎನ್ನುವುದು ನಮ್ಮ ದೇಹದಲ್ಲಿ ನೈಸರ್ಗಿಕವಾಗಿ ಉತ್ಪತ್ತಿಯಾಗುವ ಮೇಣದಂತಹ ವಸ್ತು. ಇದು ಅಧಿಕವಾದ್ರೆ ಆರೋಗ್ಯಕ್ಕೆ ಹಾನಿ ಖಚಿತ.

ಜಡ ಜೀವನಶೈಲಿ ಹಾಗೂ ಚಟುವಟಿಕೆ ಇಲ್ಲದೇ ಇರುವುದರ ಜೊತೆಗೆ ಅನಾರೋಗ್ಯಕರ ಆಹಾರ ಸೇವನೆಯು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಲು ಕಾರಣವಾಗಬಹುದು. ಕೆಟ್ಟ ಕೊಲೆಸ್ಟ್ರಾಲ್‌ಗಳನ್ನು ಎಡಿಎಲ್‌ ಎಂದು ಕರೆಯಲಾಗುತ್ತದೆ. ಇವು ನಮ್ಮ ರಕ್ತನಾಳಗಳಲ್ಲಿ ಕೊಬ್ಬಿನಾಂಶ ಶೇಖರಣೆಯನ್ನು ಉಂಟು ಮಾಡಬಹುದು. ಇದರಿಂದಾಗಿ ಅಪಮಧಮನಿಗಳಲ್ಲಿ ರಕ್ತ ಹರಿಯುವುದು ಕಷ್ಟಕರವಾಗುತ್ತದೆ. ಇದು ಹೃದಯಾಘಾತ ಹಾಗೂ ಪಾರ್ಶ್ವವಾಯುವಿನಂತಹ ಗಂಭೀರ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಆದರೆ ದೇಹದಲ್ಲಿ ಗೋಚರವಾಗುವ ಈ ಕೆಲವು...