Bangalore, ಜನವರಿ 28 -- ಬೆಂಗಳೂರು: ಕರ್ನಾಟಕದ ದೌರ್ಜನ್ಯ ಪ್ರಕಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹಲವು ದಶಕಗಳಿಂದ ಶೇ.3 ಗಿಂತ ಹೆಚ್ಚಾಗಿಲ್ಲ. ಈ ಕಾರಣಕ್ಕೂ ನಾನು ಡಿಸಿಆರ್‌ಇ ಸೆಲ್ ಗಳಿಗೆ ಪೊಲೀಸ್ ಠಾಣೆ ಶಕ್ತಿ ನೀಡಿದ್ದಾಗಿದೆ. ಇನ್ನೂ ಶಿಕ್ಷೆ ಪ್ರಮಾಣ ಹೆಚ್ಚಾಗದಿದ್ದರೆ ಹೇಗೆ? ಪ್ರಕರಣಗಳ ತನಿಖೆಯ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಪೋಕ್ಸೋ ಪ್ರಕರಣಗಳು ನ್ಯಾಯಾಲಯಗಳಲ್ಲಿ ದೀರ್ಘ ಕಾಲದಿಂದ ಬಾಕಿ ಇದ್ದರೆ ಪ್ರಾಸಿಕ್ಯೂಷನ್ ಜೊತೆ ಚರ್ಚಿಸಿ ಬೇಗ ಇತ್ಯರ್ಥ ಪಡಿಸಲು, ಶೀಘ್ರ ನ್ಯಾಯದಾನಕ್ಕೆ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು

Published by HT Digital Content Services with permission from HT Kannada....