ಭಾರತ, ಏಪ್ರಿಲ್ 16 -- ದ್ವಿತೀಯ ಪಿಯುಸಿ ಪರೀಕ್ಷೆ 2: ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ 2 ಏಪ್ರಿಲ್ 24 ರಿಂದ ಮೇ 8ರ ತನಕ ನಡೆಯಲಿದೆ. ಈಗಾಗಲೇ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸಿದ್ದಪಡಿಸಲು ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ಅಣುಕು ಪರೀಕ್ಷೆಗಳನ್ನು ನಡೆಸುವುದರ ಕಡೆಗೆ ಅಧಿಕಾರಿಗಳು ಗಮನಹರಿಸಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಸಿದ್ದತೆಗಳ ಪರಿಶೀಲನೆ ನಡೆಸುವುದಕ್ಕೆ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಶಿಕ್ಷಣ ಸಚಿವರು, ಪರೀಕ್ಷಾ ಸಂಬಂಧ ಕೈಗೊಗೊಳ್ಳಬೇಕಾಗಿರುವ ವಿವಿಧ ವಿಷಯಗಳ ಕುರಿತು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಸುತ್ತಿದ್ದು, 2025ರ ದ್ವಿತೀಯ ಪಿಯುಸಿ ಪರೀಕ್ಷೆ - 1 ಕ್ಕೆ ಹಾಜರಾತಿ ಕೊರತೆಯಿಂದ ಪರೀಕ್...