ಭಾರತ, ಏಪ್ರಿಲ್ 9 -- ಮಂಗಳೂರು: ದ್ವಿತೀಯ ಫಲಿತಾಂಶ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ಶೇ 73.45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉಡುಪಿ ಜಿಲ್ಲೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಮುಸ್ಲಿಂ ಯುವತಿಯೊಬ್ಬಳು ವಿಶೇಷ ಸಾಧನೆ ಮಾಡಿದ್ದಾಳೆ. ಆಕೆಯ ಸಾಧನೆಗೆ ಈಗ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಬೆಂಗಳೂರಿನ ನಾರಾಯಣ ಟೆಕ್ನೋ ಸ್ಕೂಲ್‌ನಲ್ಲಿ ಪಿಯುಸಿ ಓದಿರುವ ಆಶಿಫಾ ಹುಸೈನ್ ದ್ವಿತೀಯ ಭಾಷೆಯಾಗಿ ಸಂಸ್ಕೃತವನ್ನು ಆಯ್ಕೆ ಮಾಡಿಕೊಂಡಿದ್ದಳು. ಅಲ್ಲದೇ ಸಂಸ್ಕೃತದಲ್ಲಿ ಆಕೆ 100ಕ್ಕೆ 96 ಅಂಕಗಳನ್ನು ಗಳಿಸಿದ್ದಾರೆ. ಸೈನ್ಸ್ ವಿದ್ಯಾರ್ಥಿ ಆಗಿರುವ ಆಕೆ ಪಿಸಿಎಂಬಿ ಆಯ್ಕೆ ಮಾಡಿಕೊಂಡಿದ್ದು ಒಟ್ಟು 563 ಅಂಕ ಗಳಿಸಿದ್ದಾಳೆ.

ಆಶಿಫಾ ಮೂಲತಃ ಪುತ್ತೂರು ತಾಲ್ಲೂಕಿನ ಕಾವು ಅಮ್ಚಿನಡ್ಕ ನಿವಾಸಿ. ಪ್ರಸ್ತುತ ಬೆಂಗಳೂರಿನಲ್ಲಿ ಕೇಂದ್ರ ಸಂಪರ್ಕ ಇಲಾಖೆಯಲ್ಲಿ ಅಧಿಕಾರಿಯಾಗಿರುವ ಖೈರುನ್ನೀಸಾ ಮತ್ತು ಜಾಕಿರ್ ದಂಪತಿಯ ಮಗಳು.

ಇದನ್ನೂ ಓದಿ: ಕರ್ನಾಟಕ ದ್ವಿತೀಯ ಪಿಯ...