ಭಾರತ, ಏಪ್ರಿಲ್ 8 -- ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. 2025 ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 6.47 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ ಒಟ್ಟು 4.68 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡಾ ಶೇ 73.45 ರಷ್ಟು ಫಲಿತಾಂಶ ದಾಖಲಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಇದು ಕಳೆದ ಬಾರಿಗೆ ಹೋಲಿಸಿದರೆ ಶೇ 8ರಷ್ಟು ಕಡಿಮೆಯಾಗಿದೆ. 2024ರಲ್ಲಿ ಶೇ 81.15 ಫಲಿತಾಂಶ ಬಂದಿತ್ತು. ಇನ್ನು ಜಿಲ್ಲಾವಾರು ಫಲಿತಾಂಶ ನೋಡುವುದಾದರೆ ಈ ಬಾರಿ ಉಡುಪಿ ಜಿಲ್ಲೆ ಶೇ 93.90 ರಷ್ಟು ಫಲಿತಾಂಶ ದಾಖಲಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದೆ. ಕಳೆದ ಬಾರಿ ಪ್ರಥಮ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ (93.57%) ಎರಡನೇ ಸ್ಥಾನಕ್ಕೆ ಕುಸಿದಿದೆ. ಬೆಂಗಳೂರು ದಕ್ಷಿಣ (85.36%) ಮೂರನೇ ಸ್ಥಾನದಲ್ಲಿದೆ. ಶೇ 48.45ರಷ್ಟು ಫಲಿತಾಂಶ ಪಡೆಯುವುದರೊಂದಿಗೆ ಯಾದಗಿರಿ ಕೊನೆಯ ಸ್ಥಾನ ಪಡೆದಿದೆ.

1) ಪರೀಕ್ಷೆ ಬರೆದಿದ್ದ ವಿದ್ಯಾ...