Mysuru, ಜುಲೈ 18 -- ಮೈಸೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ , ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಖಚಿತ ಅಭಿಪ್ರಾಯ ವ್ಯಕ್ತಪಡಿಸಿದರು.ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಧರ್ಮಸ್ಥಳ ಸೌಜನ್ಯ ಪ್ರಕರಣ-ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿದರು.

ಆರ್ ಸಿ ಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಆಯೋಗದ ವರದಿಯ ಬಗ್ಗೆ ಪತ್ರಕರ್ತರ ಪ್ರಶ...