Mangalore, ಮೇ 18 -- ಮಂಗಳೂರು: ಧರ್ಮಸ್ಥಳ ಮೂಲದ ಯುವತಿಯೊಬ್ಬರು ಪಂಜಾಬ್ ನಲ್ಲಿ ಸಾವನ್ನಪ್ಪಿದ್ದಾರೆ. ಆಕಾಂಕ್ಷ (22) ಸಾವನ್ನಪ್ಪಿದವರು. ಜೆಟ್ ಕಂಪೆನಿಯಲ್ಲಿ ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷ ಮೂರನೇ ಮಹಡಿಯಿಂದ ಕೆಳಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರಿಂದ ಕುಟುಂಬಕ್ಕೆ ಕರೆ ಬಂದಿದೆ. ಮಗಳ ಸಾವಿನ ರೀತಿ ಕುರಿತು ತಂದೆ ಸಂಶಯ ವ್ಯಕ್ತಪಡಿಸಿದ್ದಾರೆ.ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ, ಪ್ರಸ್ತುತ ಕಾಶಿಬೆಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಸಿವಿಲ್ ಗುತ್ತಿಗೆದಾರ ಸುರೇಂದ್ರ ಮತ್ತು ಜೆಡಿಎಸ್ ಮಾಜಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22) ಅವರು ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ನಡೆದಿದೆ.

ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಜೆಟ್ ಏರೋಸ್ಪೇಸ್ ಇಂಜಿನಿಯರ್ ಆಗಿ ದೆಹಲಿಯಲ್ಲಿ ಉದ್ಯೋಗದಲ್ಲಿದ್ದರು.

ಮುಂದೆ ಜಪಾನ್ ಗೆ ಉದ್ಯೋಗಕ್ಕೆ ಹೋಗುವವರಿ...