ಭಾರತ, ಫೆಬ್ರವರಿ 18 -- Anganwadi Food Scam: ಮಹತ್ವದ ಬೆಳವಣಿಗೆಯೊಂದರಲ್ಲಿ, ಅಂಗನವಾಡಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಕೊಡಬೇಕಾಗಿದ್ದ ಅಂಗನವಾಡಿ ಪೌಷ್ಠಿಕ ಆಹಾರವನ್ನು ಅಕ್ರಮವಾಗಿ ದಾಸ್ತಾನು ಮಾಡಿಟ್ಟುಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 18 ಅಂಗನವಾಡಿ ಕಾರ್ಯಕರ್ತೆಯರು ಸೇರಿ 26 ಜನರನ್ನು ಬಂಧಿಸಿದ್ದಾರೆಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಹೇಳಿದರು.

ಧಾರವಾಡ ಹಳೇಗಬ್ಬರ ಹೊರವಲಯದ ಗೋಡೌನ್‌ನಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಅಂಗನವಾಡಿ ಪೌಷ್ಠಿಕ ಆಹಾರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಪ್ರಯತ್ನ ನಡೆದಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಸಹಾಯಕ ಆಯುಕ್ತರ ತಂಡ ಫೆ 15 ರಂದು ಸಂಜೆ 4.30ಕ್ಕೆ ದಾಳಿ ನಡೆಸಿದ್ದು, ಅಕ್ರಮವಾಗಿ ದಾಸ್ತಾನು ಮಾಡಿದ್ದ ಅಂಗನವಾಡಿ ಆಹಾರವನ್ನು ವಶಪಡಿಸಿಕೊಂಡರು. ಈ ಕೇಸ್‌ ಸಂಬಂಧ 18 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 26 ಜನರನ್ನು ಬಂಧಿಸಲಾಗಿದೆ.

ಧಾರವಾಡದ ಮಹಿಳಾ ಮತ್ತು ಮಕ್...