Delhi, ಏಪ್ರಿಲ್ 3 -- ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಸಚಿವರೊಂದಿಗೆ ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಪೂರಕ ಪ್ರಸ್ತಾವನೆಗಳನ್ನು ಮಂಜೂರು ಮಾಡಲು ಮನವಿ ಮಾಡಿದರು. ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಕರ್ನಾಟಕ ರಾಜ್ಯದ ಪರವಾಗಿ ಅಭಿನಂದಿಸಿದರು. ಧಾರವಾಡದಲ್ಲಿ ಬೈಪಾಸ್‌ ನಿರ್ಮಾಣ, ಮೈಸೂರಲ್ಲಿ ಫ್ಲೈಓವರ್‌, ಬೆಂಗಳೂರು ಪುಣೆ ಗ್ರೀನ್‌ಫೀಲ್ಡ್‌ ಎಕ್ಸ್‌ಪ್ರೆಸ್‌ ವೇ ಸೇರಿದಂತೆ ಕೇಂದ್ರದಿಂದ ರಾಜ್ಯಕ್ಕೆ ಮಂಜೂರಾಗಿರುವ ಹಾಗೂ ಮಂಜೂರು ಆಗಬೇಕಾಗಿರುವ ಕಾಮಗಾರಿಗಳ ಪಟ್ಟಿ ನೀಡಿ ಬೇಗನೇ ಆರಂಭಿಸುವಂತೆ ಮನವಿ ಮಾಡಿಕೊಂಡರು.

ಕರ್ನಾಟಕ ಸರ್ಕಾರವು ರಾಜ್ಯದ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಜಾಲದ ಅಭಿವೃದ್ಧಿಯನ್ನು ಬೆಂಬಲಿಸುತ್ತಿದ್ದ...