Bangalore, ಜನವರಿ 27 -- ಬೆಂಗಳೂರು: ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಬೇರೆ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿವೆ. ಈ ಪೈಕಿ 22 ಲಕ್ಷ ನಿವೇಶನ ಮಾಲೀಕರು ಇ- ಖಾತಾ ಮಾಡಿಸಿದ್ದಾರೆ. ಆದರೆ, 30 ರಿಂದ 32 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ-ದಾಖಲೆ ಇರುವುದಿಲ್ಲ. ಈ ಎಲ್ಲರಿಗೂ ಒಂದು ಬಾರಿಯ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದರಿಂದ ತಮ್ಮ ಖಾತೆ ಅಧಿಕೃತವಲ್ಲ ಎಂದು ವಹಿವಾಟು ನಡೆಸಲು ಇಲ್ಲವೇ ಸಾಲ ಪಡೆಯುವುದು ಸೇರಿದಂತೆ ಬ್ಯಾಂಕಿನ ಚಟುವಟಿಕೆಗಳಿಗೆ ಉಪಯೋಗವಾಗದೇ ಇದ್ದ ಆಸ್ತಿ ದಾಖಲೆಗಳಿಗೆ ಬೆಲೆ ಬರಲಿದೆ. ಆಯಾ ನಗರದ ಸನ್ನಿವೇಶ ನೋಡಿಕೊಂಡು ಹಂತ ಹಂತವಾಗಿ ಬಿ ಖಾತಾವನ್ನು ಆಸ್ತಿದಾರರಿಗೆ ನೀಡಲು ಸೂಚನೆ ನೀಡಲಾಗಿದೆ.

ಸಿಎಂ ಸಿದ್ದರಾಮಯ್ಯನವರು ಜನವರಿ.7 ರಂದು ಸಭೆ ನಡೆಸಿ ಫೆ.10 ರಿಂದ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಒಮ್ಮೆ ಇ-ಆಸ್ತಿ ನಮೂದಿಸಿ ಬಿ-ಖಾತಾ ಸಮಾನಾಂತರ ದಾಖಲೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಹೀಗಾಗಿ...