ಭಾರತ, ಮಾರ್ಚ್ 27 -- Actress Ranya Rao bail Rejected: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಕನ್ನಡ ನಟಿ ರನ್ಯಾ ರಾವ್‌ ಅವರು ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಂಡಿದೆ. ಬೆಂಗಳೂರಿನ 64ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ನಟಿ ರನ್ಯಾ ರಾವ್‌ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆದಿದೆ. ನಟಿಯು ವಿಚಾರಣೆಗೆ ಸರಿಯಾಗಿ ಸ್ಪಂದನೆ ನೀಡುತ್ತಿಲ್ಲ. ಹೀಗಾಗಿ ಇವರಿಗೆ ಜಾಮೀನು ನೀಡಬಾರದು ಎಂದು ಡಿಆರ್‌ಐ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ. ಎಲ್ಲಾ ವಾದ ಪ್ರತಿವಾದಗಳ ಆಲಿಸಿದ ನ್ಯಾಯಾಲಯವು ಅಂತಿಮವಾಗಿ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಕಿಚ್ಚ ಸುದೀಪ್‌ ಜತೆ ಮಾಣಿಕ್ಯ ಸಿನಿಮಾದಲ್ಲಿ ನಟಿಸಿದ್ದ ನಟಿ ರನ್ಯಾ ರಾವ್‌ ಅವರು ಕಳೆದ ಕೆಲವು ದಿನಗಳಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸುದ್ದಿಯಲ್ಲಿದ್ದಾರೆ.

Published by HT Digital Content Services with permission from HT Kannada....