ಭಾರತ, ಮಾರ್ಚ್ 8 -- ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧವಾಗಿರುವ ನಟಿ ರನ್ಯಾ ರಾವ್ (Ranya Rao) ಅವರನ್ನು ಡಿಆರ್‌​ಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ರನ್ಯಾಗೆ ಸಿಬಿಐ ತನಿಖೆಯ ಬಿಸಿ ಶುರು ಆಗಿದೆ. ವಿವಿಧ ವಿಮಾನ ನಿಲ್ದಾಣಗಳ ಮೂಲಕ ವಿದೇಶದಿಂದ ಭಾರತಕ್ಕೆ ಚಿನ್ನವನ್ನು ತರುವ ಕಳ್ಳಸಾಗಣೆದಾರರ ವಿರುದ್ಧ ಕೇಂದ್ರೀಯ ತನಿಖಾ ದಳ (Central Bureau of Investigation -CBI) ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ. ತನಿಖೆಯ ಮುಂದಿನ ಹಂತದಲ್ಲಿ ಸಿಬಿಐ ಅಧಿಕಾರಿಗಳು ರನ್ಯಾ ರಾವ್ ಅವರನ್ನು ಕೂಡಾ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಸೋಮವಾರ (ಮಾರ್ಚ್‌ 3) ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ಈಗ ಅಕ್ರಮ ಚಿನ್ನ ಕಳ್ಳಾಸಾಗಣೆ ಪ್ರಕರಣ ಸಿಬಿಐವರೆಗೂ ಹೋಗಿದ್ದು, ರನ್ಯಾ ಅವರಿಗೆ ತನಿಖೆಯ ಬಿಸಿ ಮುಟ್ಟಿದೆ.

ಪ್ರಕರಣದಲ್ಲಿ ಸಿಬಿಐ ಅಧಿಕಾರಿ...