ಭಾರತ, ಮಾರ್ಚ್ 6 -- ಬೆಂಗಳೂರು: ಚಿನ್ನದ ಕಳ್ಳಸಾಗಣೆ ಸಂಬಂಧ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ಮೇಲೂ ಆರೋಪವಿದ್ದು, ಆತನ ಮೇಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ರನ್ಯಾ ರಾವ್ ಜೊತೆ ಜತಿನ್ ಹುಕ್ಕೇರಿ ಹಲವು ಬಾರಿ ದುಬೈಗೆ ಪ್ರಯಾಣಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಕೆಲವು ತಿಂಗಳ ಹಿಂದಷ್ಟೇ ಇವರಿಬ್ಬರ ವಿವಾಹ ಸಮಾರಂಭ ಏರ್ಪಟ್ಟಿದ್ದು, ತಾಜ್ ವೆಸ್ಟ್ ಎಂಡ್‌ನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು.

ರನ್ಯಾ ಕೇವಲ 15 ದಿನಗಳಲ್ಲಿ ದುಬೈಗೆ ನಾಲ್ಕು ಬಾರಿ ಹೋಗಿ ಬಂದಿದ್ದು, ತನಿಖಾಧಿಕಾರಿಗಳ ಅನುಮಾನಕ್ಕೆ ಕಾರಣವಾಯ್ತು. ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ಅವರಿಂದ ಸುಮಾರು 12.56 ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ನಂತರ, ಅಧಿಕಾರಿಗಳು ಆಕೆಯ ನಿವಾಸದಲ್ಲಿ 2.06 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು 2.67 ಕೋಟಿ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಈ ಪ್ರಕರಣದಲ್...