Bengaluru, ಫೆಬ್ರವರಿ 3 -- Actress Ragini Dwivedi: ಸ್ಯಾಂಡಲ್‌ವುಡ್‌ ನಟಿ ರಾಗಿಣಿ ದ್ವಿವೇದಿ ಇತ್ತೀಚಿನ ದಿನಗಳಲ್ಲಿ ಸಿನಿಮಾ ಆಯ್ಕೆ ವಿಚಾರದಲ್ಲಿ ತುಂಬ ವಿಭಿನ್ನವಾಗಿ ಯೋಚಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ಒಂದಷ್ಟು ಪ್ರಯೋಗಗಳಿಗೂ ಅವರನ್ನು ಒಡ್ಡಿಕೊಳ್ಳುತ್ತಿದ್ದಾರೆ. ಈಗ ಆ ಸಾಲಿಗೆ ಹೊಸ ಸಿನಿಮಾ ಸೇರ್ಪಡೆಯಾಗುತ್ತಿದೆ. ಅದುವೇ "ಸರ್ಕಾರಿ ನ್ಯಾಯಬೆಲೆ ಅಂಗಡಿ" ಸಿನಿಮಾ.

ಸರ್ಕಾರಿ ನ್ಯಾಯಬೆಲೆ ಅಂಗಡಿ" ಹೀಗೊಂದು ಹೆಸರಿನಲ್ಲಿ ಚಿತ್ರವೊಂದು ತೆರೆಗೆ ಬರಲು ಸಿದ್ಧವಾಗಿದೆ. ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಹೆಚ್ಚಾಗಿ ಗ್ಲಾಮರಸ್‌ ಪಾತ್ರಗಳಲ್ಲಿ ಮಿಂಚಿದ್ದ ನಟಿ ರಾಗಿಣಿ ದ್ವಿವೇದಿ, ಸರ್ಕಾರಿ ನ್ಯಾಯಬೆಲೆ ಅಂಗಡಿ ಚಿತ್ರದಲ್ಲಿ ಪಕ್ಕಾ ಹಳ್ಳಿ ಹುಡುಗಿಯ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಈಗಾಗಲೇ ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದ ಬಹುತೇಕ ಸ್ಕ್ರಿಪ್ಟ್‌ ಕಾರ್ಯಗಳು ಪೂರ್ಣಗೊಂಡಿದ್ದು, ಇತ್ತೀಚೆಗಷ್ಟೇ ಚಿತ್ರತಂಡ ಸಿನಿಮಾದ ಟೈಟಲ್‌ ಅನ್ನು ಬಿಡುಗಡೆಗೊಳಿಸಿತ್ತು. ಇದೀಗ ಚಿತ್ರತಂಡ,...