ಭಾರತ, ಮೇ 5 -- ನಟ ಆದಿತ್ಯ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ , ಸಿಲ್ಕ್ ಮಂಜು ಅವರ ನಿರ್ಮಾಣದ, ರಂಜನ್ ಶಿವರಾಮ್ ಗೌಡ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ "ಟೆರರ್" ಚಿತ್ರದ "ಹರ ಹರ ಮಹದೇವ" ಎಂಬ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಆದಿತ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಶಿವನ ಕುರಿತದಾ ಈ ಅದ್ಭುತ ಗೀತೆಯನ್ನು ಡಾ. ವಿ.ನಾಗೇಂದ್ರಪ್ರಸಾದ್ ಬರೆದಿದ್ದು, ಹರ್ಷವರ್ಧನ್ ರಾಜ್ ಸಂಗೀತ ನೀಡಿದ್ದಾರೆ. ಎಂ.ಆರ್.ಟಿ ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಹಾಗೂ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ನಿರ್ಮಾಪಕ ಮಂಜು ಅವರ ಸ್ನೇಹಿತರಾದ ರವಿ ವಸಿಷ್ಠ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
"ಮೊದಲು ಅನ್ನದಾತರಾದ ನಿರ್ಮಾಪಕ ಮಂಜು ಅವರಿಗೆ ಧನ್ಯವಾದ ಹೇಳುತ್ತೇನೆ. ನಮ್ಮ ನಿರ್ಮಾಪಕರು ಆರೋಗ್ಯದ ತೊಂದರೆಯಿಂದ ಇಂದಿನ ಸಮಾರಂಭಕ್ಕೆ ಬಂದಿಲ್ಲ. ಹಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.