ಭಾರತ, ಏಪ್ರಿಲ್ 30 -- ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್ ಹೊಸದೊಂದು ಸಿನಿಮಾ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅದಕ್ಕೆ ʻಪಿಎʼ ಪ್ರೊಡಕ್ಷನ್ಸ್ ಎಂದು ಹೆಸರಿಟ್ಟಿದ್ದಾರೆ. ʻಪಿʼ ಅಂದರೆ ಪುಷ್ಪ ʻಎʼ ಅಂದರೆ ಅರುಣ್ ಕುಮಾರ್ ಎಂದರ್ಥ. ಯಶ್ ಅಪ್ಪ ಮತ್ತು ಅಮ್ಮನ ಹೆಸರು ಇರೋ ಈ ಪ್ರೊಡಕ್ಷನ್ ಹೌಸ್ ಮೂಲಕ ಚೊಚ್ಚಲ ಚಿತ್ರ ನಿರ್ಮಾಣವಾಗುತ್ತಿದೆ. ಅಕ್ಷಯ ತೃತೀಯ ದಿನವಾದ ಇಂದು ಚಿತ್ರತಂಡ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಿದೆ.
ʻಪಿಎʼ ಪ್ರೊಡಕ್ಷನ್ಸ್ ಮೊದಲ ಪ್ರಯತ್ನಕ್ಕೆ ʻಕೊತ್ತಲವಾಡಿʼ ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ಶ್ರೀರಾಜ್ ಎಂಬುವವರು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿ ಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.
ಇದನ್ನೂ ಓದಿ: ವಿಜಯ್ ಸೇತುಪತಿಗೆ ದುನಿಯಾ ವಿಜಯ್ ವಿಲನ್: ವಿಜಯ ಕುಮಾರ್‌ನನ್ನು ಮತ್ತೆ ಖಳನಾಗಿಸಿದ ಪುರಿ ಜಗನ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.